ಕ್ರೈಸ್ತ ಮಿಷನರಿ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಯಿಂದ ಹಿಂದೂ ವಿದ್ಯಾರ್ಥಿಯ ಹತ್ಯೆಯ ಪ್ರಕರಣ

ಕರ್ಣಾವತಿ (ಗುಜರಾತ್) – ಗುಜರಾತ್ ಸರಕಾರವು ಕರ್ಣಾವತಿಯಲ್ಲಿರುವ ‘ಸೆವೆಂತ್ ಡೇ ಅಡ್ವೆಂಟಿಸ್ಟ್’ ಶಾಲೆಯ ಸಂಪೂರ್ಣ ನಿಯಂತ್ರಣವನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಆಗಸ್ಟ್ 2025 ರಲ್ಲಿ, ಇದೇ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ನಯನ್ ಸಂತಾನಿ ಎಂಬ ಹಿಂದೂ ವಿದ್ಯಾರ್ಥಿಯನ್ನು ಅದೇ ಶಾಲೆಯ ಮುಸ್ಲಿಂ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಈ ಆಘಾತಕಾರಿ ಘಟನೆಯ ನಂತರ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಲೆಯ ಕಾರ್ಯವೈಖರಿಯ ಬಗ್ಗೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರು ಮತ್ತು ಶಾಲಾ ಆಡಳಿತ ಮಂಡಳಿಯು ಸರಿಯಿಲ್ಲ ಎಂದು ಆರೋಪಿಸಿದ್ದರು.
೧. ಈ ಘಟನೆಯ ನಂತರ, ಜಿಲ್ಲಾ ಶಿಕ್ಷಣಾಧಿಕಾರಿಗಳು ಶಾಲೆಯ ಚಟುವಟಿಕೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿಯು ಶಾಲೆಯ ಕಾರ್ಯವೈಖರಿಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಶಾಲೆಯು ಸರಕಾರಿ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ.
೨. ಅಲ್ಪಸಂಖ್ಯಾತ ಶಾಲೆಯ ಮಾನ್ಯತೆ ಪಡೆಯಲು ಅನುಸರಿಸಿದ ಪ್ರಕ್ರಿಯೆಯಲ್ಲಿಯೂ ಗಂಭೀರ ಲೋಪದೋಷಗಳಿರುವುದನ್ನು ಸಮಿತಿಯು ಉಲ್ಲೇಖಿಸಿದೆ.
೩. ಶಾಲೆಯ ನಿರ್ಲಕ್ಷ್ಯ ಮತ್ತು ನಿಯಮಗಳ ಉಲ್ಲಂಘನೆಯಿಂದಾಗಿ ಸರಕಾರವು ಶಾಲೆಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಬೇಕು ಎಂದು ತನಿಖಾ ಸಮಿತಿಯು ತನ್ನ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.
೪. ರಾಜ್ಯ ಶಿಕ್ಷಣ ಇಲಾಖೆಯು ಈ ಶಿಫಾರಸನ್ನು ಅಂಗೀಕರಿಸಿ, ಡಿಸೆಂಬರ್ 15, 2025 ರಂದು ಆದೇಶ ಹೊರಡಿಸುವ ಮೂಲಕ ಶಾಲೆಯನ್ನು ಸರಕಾರದ ನಿಯಂತ್ರಣಕ್ಕೆ ತರಲಾಗಿದೆ ಎಂದು ಘೋಷಿಸಿದೆ.
೫. ಶಾಲೆಯಲ್ಲಿ ಓದುತ್ತಿರುವ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ಸುರಕ್ಷಿತವಾಗಿಡಲು ಶಾಲೆಯ ಸಂಪೂರ್ಣ ಆಡಳಿತವು ಸರಕಾರದ ಬಳಿಯೇ ಇರಲಿದೆ ಎಂದು ತಿಳಿಸಲಾಗಿದೆ.
೬. ಕರ್ಣಾವತಿ ನಗರದ ಜಿಲ್ಲಾ ಶಿಕ್ಷಣಾಧಿಕಾರಿಯನ್ನು ಶಾಲೆಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!