ಬಿಹಾರ ಎರಡನೇ ಕೇರಳ ಆಗುವ ಆತಂಕ!

ಪಾಟ್ಲಿಪುತ್ರ (ಬಿಹಾರ) – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಬಿಹಾರದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಾಂತರ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆಮಿಷ ಮತ್ತು ವಿವಿಧ ಪ್ರಲೋಭನೆಗಳನ್ನು ನೀಡಿ ಬಡ ಹಿಂದೂ ಸಹೋದರರ ಮತಾಂತರ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಮತಾಂತರವನ್ನು ತಡೆಯಲು ಸರಕಾರವು ಕಠಿಣ ಕಾನೂನನ್ನು ಜಾರಿಗೊಳಿಸುವುದು ಅವಶ್ಯಕವಾಗಿದೆ. ಮತಾಂತರದ ಈ ಸಮಸ್ಯೆ ಇಡೀ ಬಿಹಾರದಲ್ಲಿ ಹರಡಿದ್ದು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೆ, ಬಿಹಾರ ಎರಡನೇ ಕೇರಳ ಆಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಗಿರಿರಾಜ್ ಸಿಂಗ್ ಅವರು, ರಾಜ್ಯದಲ್ಲಿ ಮತಾಂತರದ ಚಟುವಟಿಕೆಗಳು ವೇಗವಾಗಿ ನಡೆಯುತ್ತಿರುವುದು ಅತ್ಯಂತ ಚಿಂತಾಜನಕವಾಗಿದೆ ಎಂದು ಹೇಳಿದರು. ಯಾವುದೇ ರೀತಿಯ ಪ್ರಲೋಭನೆಗಳಿಗೆ ಬಲಿಯಾಗಿ ಬಡ ಮತ್ತು ದುರ್ಬಲ ವರ್ಗದವರ ಮತಾಂತರವಾಗುವುದನ್ನು ತಡೆಯುವುದಕ್ಕಾಗಿ ಕಟ್ಟುನಿಟ್ಟಿನ ಕಾನೂನು ಕ್ರಮಗಳು ಅವಶ್ಯಕವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಂಪಾದಕೀಯ ನಿಲುವುಬಿಹಾರದಲ್ಲಿ ಹಿಂದೂಗಳು ಬಿಜೆಪಿ ಮತ್ತು ಜನತಾ ದಳ (ಸಂಯುಕ್ತ) ಪಕ್ಷಗಳಿಗೆ ಭಾರಿ ಬಹುಮತದಿಂದ ಮತ ನೀಡಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಹಿಂದೂಗಳ ಸಮಸ್ಯೆಗಳನ್ನು ಪರಿಹರಿಸಲು ಈಗ ಸರಕಾರವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಹಿಂದೂಗಳು ನಿರೀಕ್ಷಿಸುತ್ತಿದ್ದಾರೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!