
ಬ್ರೆಜಿಲಿಯಾ (ಬ್ರೆಜಿಲ್) – ದಕ್ಷಿಣ ಅಮೇರಿಕಾ ಖಂಡದ ಬ್ರೆಜಿಲ್ ದೇಶದ ರಿಯೊ ಗ್ರ್ಯಾಂಡೆ ದೋ ಸುಲ್ ರಾಜ್ಯದ ಗ್ವೈಬಾ ನಗರದಲ್ಲಿ, ಭೀಕರ ಬಿರುಗಾಳಿಗೆ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಅಂದರೆ ಸ್ವಾತಂತ್ರ್ಯ ದೇವತೆಯ ಪ್ರತಿಮೆಯು ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬಿದ್ದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಲ್ಲಿನ ಹವನ್ ಮೆಗಾಸ್ಟೋರ್‌ನ ಹೊರಗೆ 24 ಮೀಟರ್ ಎತ್ತರದ ಈ ಪ್ರತಿಮೆ ಇತ್ತು. ಘಟನೆ ಸಂಭವಿಸಿದಾಗ, ಅಲ್ಲಿ ಗಾಳಿಯ ವೇಗವು ಗಂಟೆಗೆ 90 ಕಿ.ಮೀ.ಗಿಂತ ಹೆಚ್ಚಿತ್ತು. ಈ ಪ್ರತಿಮೆಯನ್ನು 2020 ರಲ್ಲಿ ಸ್ಥಾಪಿಸಲಾಗಿತ್ತು. ಇದಕ್ಕೂ ಮೊದಲು 2021 ರಲ್ಲಿ ಸಹ ಇದೇ ರೀತಿಯ ಇನ್ನೊಂದು ಪ್ರತಿಮೆ ಬ್ರೆಜಿಲ್‌ನಲ್ಲಿ ಕುಸಿದು ಬಿದ್ದಿತ್ತು. ಆಗಲೂ ಕೂಡ ಇದೇ ರೀತಿ 80 ರಿಂದ 90 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿತ್ತು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation