(ಲಿವ್-ಇನ್ ಸಂಬಂಧ ಎಂದರೆ ಪುರುಷ ಮತ್ತು ಮಹಿಳೆ ಮದುವೆಯಾಗದೆ ಒಟ್ಟಿಗೆ ವಾಸಿಸುವುದು)

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಲಿವ್ ಇನ್ ರಿಲೇಷನ್‌ಶಿಪ್ ಅನ್ನು ‘ಅಕ್ರಮ’ ಎಂದು ಕರೆಯಲು ಸಾಧ್ಯವಿಲ್ಲ ಮತ್ತು ಸ್ತ್ರೀ ಹಾಗೂ ಪುರುಷ ವಿವಾಹವಿಲ್ಲದೆ ಜೊತೆಯಾಗಿ ವಾಸಿಸುವುದು ವಿವಾಹದ ಘನತೆಯ ಉಲ್ಲಂಘನೆಯಾಗುವುದಿಲ್ಲ. ಅಂತಹ ದಂಪತಿಗಳಿಗೆ ರಕ್ಷಣೆ ನೀಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿರುವ ಕೆಲವು ಮಹಿಳೆಯರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ 12 ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ವಿವೇಕ್ ಕುಮಾರ್ ಸಿಂಗ್ ಅವರ ಪೀಠವು ಈ ತೀರ್ಪನ್ನು ನೀಡಿದೆ.
1. ಈ ಮಹಿಳೆಯರು ಶಾಂತಿಯುತ ಜೀವನ ನಡೆಸುತ್ತಿರುವಾಗ ಯಾರಾದರೂ ಅದರಲ್ಲಿ ಅಡ್ಡಿಪಡಿಸಲು ಪ್ರಯತ್ನಿಸಿದರೆ, ಈ ಮಹಿಳೆಯರಿಗೆ ತಕ್ಷಣ ರಕ್ಷಣೆ ನೀಡುವಂತೆ ಉಚ್ಚ ನ್ಯಾಯಾಲಯ ಆದೇಶಿಸಿದೆ.
2. ರಾಜ್ಯ ಸರಕಾರವು ಪ್ರತಿಯೊಬ್ಬ ನಾಗರಿಕರನ್ನು ರಕ್ಷಿಸಲು ಬದ್ಧವಾಗಿದೆ ಮತ್ತು ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುವ ದಂಪತಿಗಳನ್ನು ಮೂಲಭೂತ ಹಕ್ಕುಗಳಿಂದ ವಂಚಿತಗೊಳಿಸಲು ಸಾಧ್ಯವಿಲ್ಲ ಎಂದು ಉಚ್ಚ ನ್ಯಾಯಾಲಯ ಹೇಳಿದೆ.
3. ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುವ ಮಹಿಳೆಯರು ಸಲ್ಲಿಸಿದ ಅರ್ಜಿಗಳಲ್ಲಿ ತಮ್ಮ ಜೀವಕ್ಕೆ ಅಪಾಯವಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ಅವರಿಗೆ ತಮ್ಮ ಕುಟುಂಬದ ಸದಸ್ಯರಿಂದಲೇ ಅಪಾಯವಿತ್ತು.
4. ಅರ್ಜಿದಾರರು ತಮ್ಮ ಜಿಲ್ಲೆಯ ಪೊಲೀಸರನ್ನು ಸಂಪರ್ಕಿಸಿ ರಕ್ಷಣೆ ಕೋರಿದ್ದರೂ, ಪೊಲೀಸರು ತಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !