119 ಜನರು ಭಾರತಕ್ಕೆ ವಾಪಸ್; ಯುದ್ಧದಲ್ಲಿ 26 ಮಂದಿ ಸಾವು

ಮಾಸ್ಕೋ (ರಷ್ಯಾ) – ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯವು, ಈವರೆಗೆ ಒಟ್ಟು 204 ಭಾರತೀಯ ನಾಗರಿಕರು ರಷ್ಯಾ ಸೈನ್ಯಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಇವರಲ್ಲಿ 119 ಭಾರತೀಯರನ್ನು ಅವಧಿಗೂ ಮುನ್ನವೇ ಬಿಡುಗಡೆಗೊಳಿಸಿ ಭಾರತಕ್ಕೆ ಮರಳಿ ಕರೆತರಲಾಗಿದೆ. ಈ ಯುದ್ಧದಲ್ಲಿ ಈವರೆಗೆ 26 ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 7 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿದೆ. ಪ್ರಸ್ತುತ ರಷ್ಯಾ ಸೈನ್ಯದಲ್ಲಿರುವ ಉಳಿದ 50 ಭಾರತೀಯರನ್ನು ಶೀಘ್ರವಾಗಿ ಮುಕ್ತಗೊಳಿಸಿ ಭಾರತಕ್ಕೆ ಕರೆತರಲು ಪ್ರಯತ್ನಗಳು ನಡೆಯುತ್ತಿವೆ. ಹಾಗೆಯೇ, ಮೃತಪಟ್ಟ 10 ಭಾರತೀಯರ ಪಾರ್ಥಿವ ಶರೀರಗಳನ್ನು ಭಾರತಕ್ಕೆ ತರುವ ಪ್ರಕ್ರಿಯೆಯೂ ನಡೆಯುತ್ತಿದೆ.
ಭಾರತದಿಂದ ಡಿಎನ್‌ಎ ನಮೂನೆ ರವಾನೆ
ಭಾರತ ಸರಕಾರವು ರಷ್ಯಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಭಾರತೀಯ ನಾಗರಿಕರ ಸುರಕ್ಷತೆ, ಕಲ್ಯಾಣ ಮತ್ತು ತಕ್ಷಣದ ಬಿಡುಗಡೆಗಾಗಿ ರಷ್ಯಾದೊಂದಿಗೆ ಎಲ್ಲಾ ಹಂತಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರಲ್ಲಿ ಉಭಯ ದೇಶಗಳ ನಾಯಕರು, ಸಚಿವರು ಮತ್ತು ಹಿರಿಯ ಅಧಿಕಾರಿಗಳ ನಡುವಿನ ಸಂವಾದವೂ ಸೇರಿದೆ. ಮೃತಪಟ್ಟ ಅಥವಾ ನಾಪತ್ತೆಯಾದ ಭಾರತೀಯರ ಪೈಕಿ 18 ಜನರ ಡಿ.ಎನ್.ಎ. (ಡಿ ಆಕ್ಸಿರಿಬೋ ನ್ಯೂಕ್ಲಿಯರ್ ಆಸಿಡ್ ಎಂದರೆ ವ್ಯಕ್ತಿಯ ಮೂಲ ಗುರುತನ್ನು ಪತ್ತೆಹಚ್ಚುವ ದೇಹದ ಅಂಶಗಳು) ಮಾದರಿಗಳನ್ನು ರಷ್ಯಾ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಗುರುತು ಪತ್ತೆ ಹಚ್ಚುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.
128 ದೇಶಗಳಿಂದ ಸೈನಿಕರ ನೇಮಕಾತಿಗೆ ರಷ್ಯಾ ಪ್ರಯತ್ನ
ಯುದ್ಧ ಆರಂಭವಾದ ನಂತರ ರಷ್ಯಾ ಹಲವು ದೇಶಗಳಲ್ಲಿ ನೇಮಕಾತಿ ಅಭಿಯಾನವನ್ನು ತೀವ್ರಗೊಳಿಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಷ್ಯಾ ಈವರೆಗೆ ಸುಮಾರು 128 ದೇಶಗಳ ವಿದೇಶಿ ನಾಗರಿಕರನ್ನು ಸೈನ್ಯಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿದೆ. ಈ ಯುದ್ಧವನ್ನು ಇದುವರೆಗಿನ ಅತ್ಯಂತ ಭೀಕರ ಸಂಘರ್ಷ ಎಂದು ಪರಿಗಣಿಸಲಾಗಿದೆ. ಈ ಹೋರಾಟದಲ್ಲಿ ಈವರೆಗೆ 10 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೇವಲ ರಷ್ಯಾದ ಸುಮಾರು 7 ಲಕ್ಷದ 90 ಸಾವಿರ ಸೈನಿಕರು ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ, ಹಾಗೂ 85 ಸಾವಿರ ಸೈನಿಕರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman