ಆಸ್ಸಾಂನಲ್ಲಿ ಸರಕಾರಿ ಭೂಮಿಯ ಮೇಲಿನ ಅತಿಕ್ರಮಣಕಾರರನ್ನು ತೆರವುಗೊಳಿಸಲು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದವರ ಮೇಲೆ ಪೊಲೀಸರಿಂದ ಕ್ರಮ

ಗೌಹಾಟಿ (ಆಸ್ಸಾಂ) – ಆಸ್ಸಾಂನ ಪಶ್ಚಿಮ ಕಾರ್ಬಿ ಆಂಗಲೊಂಗ್ ಜಿಲ್ಲೆಯಲ್ಲಿ ಸರಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ನಂತರ, ಪ್ರತಿಭಟನಾಕಾರರು ಕಲ್ಲುತೂರಾಟ ಮತ್ತು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಆಕ್ರೋಶಗೊಂಡ ಗುಂಪು ಭಾಜಪ ನಾಯಕನ ಮನೆಗೆ ಬೆಂಕಿ ಹಚ್ಚಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಈ ಘಟನೆಯಲ್ಲಿ 3 ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಇಲ್ಲಿ ೯ ಜನ ಆಂದೋಲನಕಾರರು ಕಳೆದ ಎರಡು ವಾರಗಳಿಂದ ಉಪವಾಸ ಸತ್ಯಾಗ್ರಹ ಕುಳಿತಿದ್ದರು.
ಕಾರ್ಬಿ ಆಂಗಲೊಂಗ್ ಸ್ವಾಯತ್ತ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಭಾಜಪ ನಾಯಕ ತುಳಿರಾಮ ರೊಂಗಹಾಂಗ್ ಅವರ ಮನೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದರು. ರೊಂಗಹಾಂಗ್ ಅವರ ಡೊಂಗಕಾಮುಕಮ್ ಭಾಗದಲ್ಲಿರುವ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ ಆಕ್ರೋಶಿತ ಗುಂಪು ಮನೆಗೆ ಬೆಂಕಿ ಹಚ್ಚಿತು. ಬೆಂಕಿ ಹಚ್ಚಿದ ಸಮಯದಲ್ಲಿ ರೊಂಗಹಾಂಗ್ ಮನೆಯಲ್ಲಿ ಇರಲಿಲ್ಲ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ರೊಂಗಹಾಂಗ್, ಉಪವಾಸ ಸತ್ಯಾಗ್ರಹವನ್ನು ನಾವು ವಿರೋಧಿಸುವುದಿಲ್ಲ; ಆದರೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಇಂದು ಆಂದೋಲನಕಾರರನ್ನು ಮಾತುಕತೆಗೆ ಕರೆಯಲಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅವರು ತಪ್ಪು ತಿಳಿದುಕೊಂಡಿದ್ದಾರೆ. ಆದುದರಿಂದ ಈ ಹಿಂಸಾಚಾರ ಉಂಟಾಗಿದೆ ಎಂದು ಹೇಳಿದರು.
ಸರಕಾರಿ ಭೂಮಿಯ ಮೇಲೆ ಬಿಹಾರಿ ನೋನಿಯಾ ಸಮುದಾಯದ ನಾಗರಿಕರು ಅತಿಕ್ರಮಣ ಮಾಡಿದ್ದಾರೆ. ೧೯೮೩ ರಿಂದ ಕೆಲವು ಕುಟುಂಬಗಳು ಅಲ್ಲಿ ವಾಸಿಸುತ್ತಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅತಿಕ್ರಮಣ ತೆರವುಗೊಳಿಸುವ ಕ್ರಮ ನಡೆಯಬಾರದೆಂದು ಈ ಸಮುದಾಯವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದೆ. ಅಲ್ಲದೆ, ಗೌಹತ್ತಿ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೂಡ ಸಲ್ಲಿಸಿದೆ.
ಸಂಪಾದಕೀಯ ನಿಲುವುಸರಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಜನಸಾಮಾನ್ಯರು ಉಪವಾಸ ಸತ್ಯಾಗ್ರಹವನ್ನು ಏಕೆ ಮಾಡಬೇಕಾಗುತ್ತದೆ? ಆಡಳಿತ ಸ್ವತಃ ಅದನ್ನು ಏಕೆ ತೆರವುಗೊಳಿಸುವುದಿಲ್ಲ? ಇಂತಹ ಸಮಯದಲ್ಲಿ ಪ್ರತಿಭಟನಾಕಾರರ ಮೇಲೆಯೇ ಯಾರಾದರೂ ಕ್ರಮ ಕೈಗೊಂಡರೆ ಮತ್ತು ಅದರಿಂದ ಅವರ ಆಕ್ರೋಶವು ಸ್ಫೋಟಗೊಂಡರೆ, ಇದಕ್ಕೆ ಯಾರು ಹೊಣೆ? |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !