ಇಸ್ರೋದಿಂದ ಹೊಸ ಇತಿಹಾಸ ಸೃಷ್ಟಿ

ನವದೆಹಲಿ – ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅಮೆರಿಕದ ‘ಬ್ಲೂಬರ್ಡ್ ಬ್ಲಾಕ್ 2’ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹದ ಒಟ್ಟು ತೂಕ 6 ಸಾವಿರದ 100 ಕೆಜಿ ಇದೆ. ಇದು ಭಾರತದಿಂದ ಬಾಹ್ಯಾಕಾಶಕ್ಕೆ ಕಳುಹಿಸಲಾದ ಇದುವರೆಗಿನ ಅತ್ಯಂತ ಹೆಚ್ಚು ತೂಕದ ಉಪಗ್ರಹವಾಗಿದೆ. ಡಿಸೆಂಬರ್ 24 ರಂದು ಬೆಳಿಗ್ಗೆ 8.55 ಕ್ಕೆ ಈ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ‘ಬ್ಲೂಬರ್ಡ್ ಬ್ಲಾಕ್ 2’ ಉಪಗ್ರಹವನ್ನು ‘ಬ್ರಾಡ್‌ಬ್ಯಾಂಡ್ ಕನೆಕ್ಟಿವಿಟಿ’ಗಾಗಿ (ಇಂಟರ್ನೆಟ್) ಸಿದ್ಧಪಡಿಸಲಾಗಿದೆ. ಇದರ ಮೂಲಕ ಭೂಮಿಯ ಮೇಲೆ 4ಜಿ, 5ಜಿ ಮತ್ತು ವಿಡಿಯೋ ಕಾಲ್ ಸೇವೆಗಳನ್ನು ಇನ್ನಷ್ಟು ಬಲಪಡಿಸಲು ಸಹಕಾರಿಯಾಗಲಿದೆ.
ಪ್ರಧಾನಮಂತ್ರಿ ಮೋದಿಯವರಿಂದ ಇಸ್ರೋಗೆ ಅಭಿನಂದನೆ

‘ಬ್ಲೂಬರ್ಡ್ ಬ್ಲಾಕ್ 2’ ಯಶಸ್ವಿ ಉಡಾವಣೆಯ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೋ ತಂಡವನ್ನು ಅಭಿನಂದಿಸಿದ್ದಾರೆ. ಅವರು ‘ಎಕ್ಸ್’ (ಟ್ವಿಟರ್) ನಲ್ಲಿ, “ಭಾರತದ ನೆಲದಿಂದ ಉಡಾವಣೆ ಮಾಡಲಾದ ಅತ್ಯಂತ ತೂಕದ ಉಪಗ್ರಹವನ್ನು ನಿಗದಿತ ಕಕ್ಷೆಗೆ ಸೇರಿಸಿರುವುದು ಭಾರತದ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ಹೆಮ್ಮೆಯ ಮೈಲಿಗಲ್ಲು. ಇದರಿಂದ ಭಾರತದ ಸಾಮರ್ಥ್ಯ ಇನ್ನಷ್ಟು ಬಲಗೊಂಡಿದೆ. ಭಾರತವು ಇದೇ ರೀತಿ ಹೊಸ ಎತ್ತರಗಳನ್ನು ತಲುಪುತ್ತಿರಲಿ. ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು.” ಎಂದು ಬರೆದಿದ್ದಾರೆ.
Powered by India’s youth, our space programme is getting more advanced and impactful.
With LVM3 demonstrating reliable heavy-lift performance, we are strengthening the foundations for future missions such as Gaganyaan, expanding commercial launch services and deepening global… pic.twitter.com/f53SiUXyZr
— Narendra Modi (@narendramodi) December 24, 2025
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!