
ಗುವಾಹಟಿ (ಅಸ್ಸಾಂ) – ಅಸ್ಸಾಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಸತತ ಎರಡನೇ ದಿನ ಆದಿವಾಸಿಗಳು ನಡೆಸಿದ ಹಿಂಸಾಚಾರದಲ್ಲಿ ಇಬ್ಬರ ಸಾವಾಗಿದೆ, ಹಾಗೂ ೩೭ ಮಂದಿ ಪೊಲೀಸರು ಸೇರಿದಂತೆ ೪೫ ಜನರು ಗಾಯಗೊಂಡಿದ್ದಾರೆ. ಸುಟ್ಟಿರುವ ಕಟ್ಟಡವೊಂದರಿಂದ ೨೫ ವರ್ಷದ ಸುರೇಶ್ ಡೇ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ, ಮತ್ತು ಅಥಿಕ್ ತಿಮುಂಗ್ ಎಂಬವರು ಈ ಸಂಘರ್ಷದ ಸಮಯದಲ್ಲಿ ಅಸುನೀಗಿದ್ದಾರೆ. ಹಿಂಸಾಚಾರದಲ್ಲಿ ಅನೇಕ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು, ಹಾಗೂ ಅಶ್ರುವಾಯು ಪ್ರಯೋಗಿಸಬೇಕಾಯಿತು. ಸ್ಥಳೀಯ ಸರ್ಕಾರವು ಕಾರ್ಬಿ ಆಂಗ್ಲಾಂಗ್ ಮತ್ತು ಪಶ್ಚಿಮ ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಏನಿದು ಪ್ರಕರಣ?
ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳಿಗೆ ಸಂಬಂಧಿಸಿದ ಆದಿವಾಸಿ ಪ್ರತಿಭಟನಕಾರರು, ಕಾರ್ಬಿ ಆಂಗ್ಲಾಂಗ್ ಮತ್ತು ಪಶ್ಚಿಮ ಕಾರ್ಬಿ ಆಂಗ್ಲಾಂಗ್ ಜಿಲ್ಲೆಗಳಲ್ಲಿರುವ ವಾಣಿಜ್ಯ ಮೇವು ಮೀಸಲು ಮತ್ತು ಗ್ರಾಮೀಣ ಮೇವು ಮೀಸಲು ಪ್ರದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಜನರನ್ನು ತೆರವುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಈ ಹಿಂಸಾಚಾರ ನಡೆಯುತ್ತಿದೆ. ಈ ಪ್ರಕರಣದಲ್ಲಿ ಬಿಜೆಪಿಯ ಒಬ್ಬ ನಾಯಕರ ಮನೆಯನ್ನು ಸಹ ಸುಟ್ಟು ಹಾಕಲಾಗಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !