
ನವ ದೆಹಲಿ – ಇಲ್ಲಿನ ಪಟಿಯಾಲ ನ್ಯಾಯಾಲಯವು ಅಬ್ದುಲ್ ಸುಭಾನ್ ಖುರೇಷಿ ಮತ್ತು ಅರೀಜ ಖಾನ್ ಎಂಬ ಇಬ್ಬರು ಆರೋಪಿಗಳನ್ನು ಬಲವಾದ ಪುರಾವೆಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿದೆ. ಅಬ್ದುಲ್ ಸುಭಾನ್ ಖುರೇಷಿಯನ್ನು ೨೦೦೬ ರ ಮುಂಬಯಿ ರೈಲು ಬಾಂಬ್ ಸ್ಫೋಟ ಮತ್ತು ಗುಜರಾತ್ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಈತನು ನಿಷೇಧಿತ ‘ಇಂಡಿಯನ್ ಮುಜಾಹಿದ್ದೀನ್’ ಎಂಬ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಆರೋಪವಿತ್ತು.
೧. ಇನ್ನೊಬ್ಬ ಆರೋಪಿ ಅರೀಜ್ ಖಾನ್ ಮೇಲೆ ಇಂಡಿಯನ್ ಮುಜಾಹಿದ್ದೀನ್ ಮತ್ತು ಸಿಮಿ ಎಂಬ ಭಯೋತ್ಪಾದಕ ಸಂಘಟನೆಗಳನ್ನು ಪುನರುಜ್ಜೀವನಗೊಳಿಸಿದ ಆರೋಪ ಹೊರಿಸಲಾಗಿತ್ತು. ಇಬ್ಬರೂ ಆರೋಪಿಗಳ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಖುರೇಷಿಯನ್ನು ಪೂರ್ವ ದೆಹಲಿಯ ಗಾಜಿಪುರದಿಂದ ಜನವರಿ ೨೩, ೨೦೧೮ ರಂದು ಬಂಧಿಸಲಾಗಿತ್ತು. ಅರೀಜ್ ಖಾನ್ ದೆಹಲಿಯ ಬಾಟ್ಲಾ ಹೌಸ್ ಚಕಮಕಿಯ ಪ್ರಕರಣದ ನಂತರ ದೇಶದಿಂದ ಪರಾರಿಯಾಗಿದ್ದನು. ಆತನನ್ನು ಫೆಬ್ರವರಿ ೧೪, ೨೦೧೮ ರಂದು ನೇಪಾಳ ಗಡಿಯಲ್ಲಿ ಬಂಧಿಸಲಾಗಿತ್ತು.
೨. ನ್ಯಾಯಾಲಯವು ತೀರ್ಪಿನ ಸಮಯದಲ್ಲಿ, ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ಹೇಳಿದೆ. ಅಲ್ಲದೆ ಅವರು ಸಿಮಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಅಥವಾ ಆ ಸಂಘಟನೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ ಅಥವಾ ಅವರು ಭಾರತ ವಿರೋಧಿ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ದೃಢವಾದ ಸಾಕ್ಷ್ಯಗಳಿಲ್ಲ. ಆರೋಪಪಟ್ಟಿಯಲ್ಲಿನ ಸಾಕ್ಷಿಗಳ ಪಟ್ಟಿಯಲ್ಲಿ ಪ್ರಮುಖವಾಗಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ದಾಖಲೆ ಮಾಡುವ ಸಿಬ್ಬಂದಿಗಳ ಹೆಸರುಗಳಿವೆ. ಆದ್ದರಿಂದ ಈ ಪ್ರಕರಣದಲ್ಲಿ ಆರೋಪಿಗಳು ದೋಷಿಗಳೆಂದು ಕಂಡುಬರುತ್ತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !