
ಕೊಲಕಾತಾ – 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾಜಕೀಯ ತಾಪಮಾನ ಹೆಚ್ಚಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ದೃಷ್ಟಿಯಿಂದ ಸಿದ್ಧತೆಗಳನ್ನೂ ಆರಂಭಿಸಿವೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾಹ ಅವರು ಡಿಸೆಂಬರ್ 30 ರಂದು ಕೊಲಕಾತಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಅವರು ರಾಜ್ಯದ ತೃಣಮೂಲ ಕಾಂಗ್ರೆಸ್ ಪಕ್ಷದ ಮೇಲೆ ಅಕ್ರಮ ವಲಸೆ, ಭ್ರಷ್ಟಾಚಾರ, ದುರಾಡಳಿತ ಸೇರಿದಂತೆ ಹಲವು ವಿಷಯಗಳ ಕುರಿತು ತೀವ್ರ ವಾಗ್ದಾಳಿ ನಡೆಸಿದರು. 2026ರಲ್ಲಿ ಪ.ಬಂಗಾಳದಲ್ಲಿ ಭಾಜಪ ಸರಕಾರ ಸ್ಥಾಪನೆಯಾಗಲಿದೆ. ಅಕ್ರಮ ವಲಸೆ ತಡೆಗಟ್ಟುವ ವಿಷಯದ ಮೇಲೆಯೇ 2026ರ ಪ.ಬಂಗಾಳ ಚುನಾವಣೆ ನಡೆಯಲಿದೆ, ಎಂದು ಶಾಹ ಹೇಳಿದರು.
भय, भ्रष्टाचार, कुशासन और घुसपैठ से त्रस्त, बंगाल की जनता ने विकास, विरासत और गरीब कल्याण वाली भाजपा को लाने का संकल्प ले लिया है।
ভয়, দুর্নীতি, কুশাসন ও অনুপ্রবেশে অতিষ্ঠ বাংলার মানুষ উন্নয়ন, ঐতিহ্য ও গরিব কল্যাণই যাদের আদর্শ সেই বিজেপিকে আনতে দৃঢ় সংকল্প গ্রহণ করেছে। pic.twitter.com/ICZlp8fDOv
— Amit Shah (@AmitShah) December 30, 2025
ಅ
ಶಾಹ ಅವರು ಮುಂದೆ ಮಾತನಾಡಿ:
೧. ಚುನಾವಣೆಯಲ್ಲಿ ಗೆಲ್ಲಲು ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
೨. ತೃಣಮೂಲ ಕಾಂಗ್ರೆಸ್ ಸರಕಾರವು ಭೂಮಿ ನೀಡದ ಕಾರಣ ಕೇಂದ್ರ ಸರಕಾರವು ಬಾಂಗ್ಲಾದೇಶದ ಗಡಿಯಲ್ಲಿ ಬೇಲಿ ಹಾಕುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.
೩. ಕಳೆದ 15 ವರ್ಷಗಳ ತೃಣಮೂಲ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಭಯ, ಭ್ರಷ್ಟಾಚಾರ ಮತ್ತು ದುರಾಡಳಿತ ನಡೆಯುತ್ತಿದೆ. ಇದರಿಂದಾಗಿ ಬಂಗಾಳದ ಸಾಮಾನ್ಯ ನಾಗರಿಕರು ಚಿಂತಿತರಾಗಿದ್ದಾರೆ. ಭ್ರಷ್ಟಾಚಾರದಿಂದಾಗಿ ಪ.ಬಂಗಾಳದ ಅಭಿವೃದ್ಧಿ ಕುಂಠಿತಗೊಂಡಿದೆ.
೪. ಪ.ಬಂಗಾಳದ ಗಡಿಯಲ್ಲಿ ನಡೆಯುತ್ತಿರುವ ಅಕ್ರಮ ವಲಸೆಯು ದೇಶದ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು.
೫. ಏಪ್ರಿಲ್ 2026ರ ನಂತರ ಪ.ಬಂಗಾಳದಲ್ಲಿ ಭಾಜಪ ಸರಕಾರ ಸ್ಥಾಪನೆಯಾದಾಗ, ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಮತ್ತೆ ಪುನರುಜ್ಜೀವನಗೊಳಿಸಲಾಗುವುದು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”