
ಕಾರಕಾಸ್ (ವೆನೆಜುವೆಲಾ) – ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ‘ವೆನೆಜುವೆಲಾದ ಮೇಲೆ ಕೆಲ ಕಾಲ ಅಮೆರಿಕದ ನಿಯಂತ್ರಣವಿರಲಿದೆ’ ಅಲ್ಲದೆ, ವೆನೆಜುವೆಲಾದಲ್ಲಿರುವ ತೈಲ ನಿಕ್ಷೇಪಗಳನ್ನು ಅಮೆರಿಕ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದು, ಅದನ್ನು ಇತರ ದೇಶಗಳಿಗೆ ಮಾರಾಟ ಮಾಡಲಿದೆ ಎಂದು ಹೇಳಿದ್ದಾರೆ. “ವೆನೆಜುವೆಲಾದ ನಾಗರಿಕರ ಹಿತಾಸಕ್ತಿಯ ಬಗ್ಗೆ ಯಾವುದೇ ಆಸಕ್ತಿ ಇಲ್ಲದ ವ್ಯಕ್ತಿಯ ಕೈಯಲ್ಲಿ ನಾವು ವೆನೆಜುವೆಲಾದ ಅಧಿಕಾರವನ್ನು ನೀಡುವುದಿಲ್ಲ,” ಎಂದೂ ಕೂಡ ಟ್ರಂಪ್ ಹೇಳಿದ್ದಾರೆ.
ಈಗ ಮೆಕ್ಸಿಕೋ, ಕ್ಯೂಬಾ ಮತ್ತು ಕೊಲಂಬಿಯಾದ ಸರದಿ!
ಟ್ರಂಪ್ ಅವರು ದಕ್ಷಿಣ ಅಮೆರಿಕ ಖಂಡದ ಇತರ ದೇಶಗಳಿಗೂ ಎಚ್ಚರಿಕೆ ನೀಡಿದ್ದಾರೆ. ಮಾದಕ ವಸ್ತುಗಳನ್ನು ಉತ್ಪಾದಿಸುವವರಿಗೆ ಆಶ್ರಯ ನೀಡುವ ಮೆಕ್ಸಿಕೋ, ಕ್ಯೂಬಾ ಮತ್ತು ಕೊಲಂಬಿಯಾ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಅವರು ‘ವೆನೆಜುವೆಲಾದ ನಂತರ ನಿಮ್ಮ ದೇಶಗಳ ಮೇಲೆ ದಾಳಿಗಳಾಗಬಹುದು’ ಎಂಬ ಎಚ್ಚರಿಕೆ ನೀಡಿದ್ದಾರೆ.
ವೆನೆಜುವೆಲಾ ಕಾರ್ಯಾಚರಣೆಯಲ್ಲಿ ೪೦ ಜನರ ಸಾವು
ವೆನೆಜುವೆಲಾದ ರಾಜಧಾನಿ ಕಾರಕಾಸ್ ನಗರದ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇದುವರೆಗೆ ೪೦ ಜನರು ಸಾವನ್ನಪ್ಪಿರುವ ಮಾಹಿತಿ ಬಹಿರಂಗವಾಗಿದೆ. ವೆನೆಜುವೆಲಾ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಹೆಸರು ಬಹಿರಂಗಪಡಿಸದಿರುವ ಷರತ್ತಿನ ಮೇಲೆ ಈ ಮಾಹಿತಿಯನ್ನು ನೀಡಿದ್ದಾರೆ.
ಅಮೆರಿಕದ ಸೈನಿಕರು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಸೆರೆಹಿಡಿದು ಅಮೆರಿಕಕ್ಕೆ ಕರೆದೊಯ್ದಿದ್ದು, ಮ್ಯಾನ್‌ಹ್ಯಾಟನ್‌ನ ಫೆಡರಲ್ ನ್ಯಾಯಾಲಯದಲ್ಲಿ ಅವರ ಮೇಲೆ ಮೊಕದ್ದಮೆ ನಡೆಸಲಾಗುವುದು ಎಂಬ ಮಾಹಿತಿಯಿದೆ.
ಸಂಪಾದಕೀಯ ನಿಲುವುಅಮೆರಿಕ ಯಾವ ದೇಶದ ಬಗ್ಗೆ ಹಸ್ತಕ್ಷೇಪ ಮಾಡಿದೆಯೋ, ಆ ದೇಶವು ಪಾತಾಳಕ್ಕೆ ಹೋಗಿದೆ ಎಂಬುದು ಇತಿಹಾಸವೇ ಇದೆ. ಅಫ್ಘಾನಿಸ್ತಾನವು ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಭವಿಷ್ಯದಲ್ಲಿ ವೆನೆಜುವೆಲಾ ಕೂಡ ಅಧಃಪತನಗೊಂಡರೆ ಆಶ್ಚರ್ಯವಿಲ್ಲ! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !