
ಬೀಜಿಂಗ (ಚೀನಾ) – ಕಾಶ್ಮೀರ ಸಮಸ್ಯೆಯನ್ನು ದ್ವಿಪಕ್ಷೀಯ ಒಪ್ಪಂದಗಳ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಚೀನಾ ವ್ಯಕ್ತಪಡಿಸಿದೆ. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಪಾಕಿಸ್ತಾನದ ಉಪಪ್ರಧಾನಿ ಇಶಾಕ್ ಡಾರ್ ಅವರ ನಡುವಿನ ಏಳನೇ ಕಾರ್ಯತಂತ್ರದ ಚರ್ಚೆಯ ನಂತರ ಹೊರಡಿಸಲಾದ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಬಗ್ಗೆ ಉಲ್ಲೇಖವಿದೆ; ಆದರೆ ಚೀನಾ ಪಾಕಿಸ್ತಾನದ ಪರವಾಗಿ ಯಾವುದೇ ನಿಲುವನ್ನು ತಳೆದಿಲ್ಲ.
ಜಂಟಿ ಹೇಳಿಕೆಯಲ್ಲಿ, ಜಮ್ಮು-ಕಾಶ್ಮೀರ ಮತ್ತು ಅದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಾಕಿಸ್ತಾನವು ಚೀನಾಕ್ಕೆ ಮಾಹಿತಿ ನೀಡಿದೆ ಎಂದು ನಮೂದಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಚೀನಾ, ಜಮ್ಮು-ಕಾಶ್ಮೀರ ವಿವಾದವು ಐತಿಹಾಸಿಕ ಹಿನ್ನೆಲೆ ಹೊಂದಿರುವ ವಿಷಯವಾಗಿದೆ ಎಂಬ ತನ್ನ ಹಳೆಯ ನಿಲುವನ್ನು ಪುನರುಚ್ಚರಿಸಿದೆ.
ಈ ಸಮಸ್ಯೆಯನ್ನು ವಿಶ್ವಸಂಸ್ಥೆಯ ಸನ್ನದು, ಸಂಬಂಧಿತ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳ ಆಧಾರದ ಮೇಲೆ ಶಾಂತಿಯುತವಾಗಿ ಬಗೆಹರಿಸುವುದು ಅಗತ್ಯವಾಗಿದೆ. ಉಭಯ ದೇಶಗಳು ಸಮಾನತೆ ಮತ್ತು ಪರಸ್ಪರ ಹಿತಾಸಕ್ತಿಯ ತತ್ವದ ಮೇಲೆ ಗಡಿಯಾಚೆಗಿನ ಜಲಸಂಪನ್ಮೂಲಗಳ ಸಹಕಾರಕ್ಕೆ ಒತ್ತು ನೀಡಿದವು, ಹಾಗೆಯೇ ಅಂತರರಾಷ್ಟ್ರೀಯ ಕಾನೂನುಬದ್ಧ ಜವಾಬ್ದಾರಿಗಳ ಪಾಲನೆ ಮುಖ್ಯವೆಂದು ತಿಳಿಸಿದವು.
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಬಗ್ಗೆ ಮೌನ!
ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಭದ್ರತೆಯ ಮಹತ್ವವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ; ಆದರೆ ಭಾರತವು ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರದ ಬಗ್ಗೆ ಜಂಟಿ ಹೇಳಿಕೆಯಲ್ಲಿ ಯಾವುದೇ ಉಲ್ಲೇಖ ಮಾಡಿಲ್ಲ. ಪಹಲ್ಗಾಮ್ ದಾಳಿಯ ನಂತರ ಭಾರತದ ಸರಕಾರಿ ವ್ಯವಸ್ಥೆಯು ಈ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಒಟ್ಟಾರೆಯಾಗಿ, ಚೀನಾವು ಸಮತೋಲಿತ ನಿಲುವನ್ನು ತಳೆಯುವ ಮೂಲಕ ಕಾಶ್ಮೀರ ಸಮಸ್ಯೆಗೆ ದ್ವಿಪಕ್ಷೀಯ ಮಾರ್ಗದ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು