ಪಾಕಿಸ್ತಾನ ತಕ್ಕ ಉತ್ತರ ನೀಡಲಿದೆ: ಪಾಕ್ ಸೇನಾಧಿಕಾರಿ

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನಿ ಸೇನೆಯ ಮಾಧ್ಯಮ ವಿಭಾಗದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹಮದ್ ಶರೀಫ್ ಚೌಧರಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ‘ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಮತ್ತು ಭಾರತ ಒಂದಾಗಿ ಪಾಕಿಸ್ತಾನದಲ್ಲಿ ಅಸ್ಥಿರತೆಯನ್ನು ಸೃಷ್ಟಿಸುತ್ತಿವೆ. ಪಾಕಿಸ್ತಾನವು ಇಬ್ಬರನ್ನೂ ಏಕಕಾಲದಲ್ಲಿ ಎದುರಿಸಬಲ್ಲದು. ಆಗಲೂ ಸಮಾಧಾನವಾಗದಿದ್ದರೆ ಹಣ ಹಿಂತಿರುಗಿಸಲಾಗುವುದು’ ಎಂದು ಹಾಸ್ಯಾಸ್ಪದ ಹೇಳಿಕೆ ನೀಡಿದ್ದರು. ಶರೀಫ್ ಚೌಧರಿ ಅವರ ಹೇಳಿಕೆಯ ಬಳಿಕ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಅವರ ಭಾಷಣವನ್ನು ಮೂರನೇ ದರ್ಜೆಯ ಸಿನಿಮಾದ ಸಂಭಾಷಣೆಗಳಿಗೆ ಹೋಲಿಸಿದ್ದಾರೆ. ಇನ್ನು ಕೆಲವರು, ಅವರು ಉನ್ನತ ಹುದ್ದೆಯಲ್ಲಿದ್ದರೂ ಸಹ ಈ ರೀತಿಯಾಗಿ ಹಾಸ್ಯಾಸ್ಪದವಾಗಿ ಮಾತನಾಡುತ್ತಿರುವುದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವುಇದಕ್ಕೆ ಹೇಳುವುದು ಕಳ್ಳನಿಗೊಂದು ಪಿಳ್ಳೆ ನೆವ ಅಂತ |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಪಾಕ್ ಸೈನಿಕರಿಂದ ಗುಂಡಿನ ದಾಳಿ : ೧೨ ಸಾವು, ೩೮ ಜನರಿಗೆ ಗಾಯ : POK Protest
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump