|

ನವದೆಹಲಿ – ದೆಹಲಿ ಉಚ್ಚ ನ್ಯಾಯಾಲಯವು ದೆಹಲಿ ಮಹಾನಗರ ಪಾಲಿಕೆಗೆ ಶಾಹಿ ಜಾಮಿಯಾ ಮಸೀದಿಯ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳ ಸಮೀಕ್ಷೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಆದೇಶ ನೀಡಿದೆ. ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ನ್ಯಾಯಾಲಯವು ಎರಡು ತಿಂಗಳ ಕಾಲಾವಕಾಶ ನೀಡಿದೆ.
೧. ಅರ್ಜಿಯಲ್ಲಿನ ಆರೋಪಗಳನ್ನು ಮಹಾನಗರ ಪಾಲಿಕೆಯು ಗಂಭೀರವಾಗಿ ಪರಿಗಣಿಸಬೇಕು ಮತ್ತು ಆ ದೂರುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ವೇಳೆ ಅಕ್ರಮ ಕಟ್ಟಡಗಳು ಕಂಡುಬಂದಲ್ಲಿ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
೨. ಮಹಾನಗರ ಪಾಲಿಕೆಯ ಸಾರ್ವಜನಿಕ ಉದ್ಯಾನವನಗಳ ಮೇಲಿನ ಅತಿಕ್ರಮಣ ಮತ್ತು ಜಾಮಿಯಾ ಮಸೀದಿ ಪ್ರದೇಶದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಈ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು. ಸಾರ್ವಜನಿಕ ಭೂಮಿಯಲ್ಲಿ ಅಕ್ರಮ ವಾಹನ ನಿಲುಗಡೆ ತಾಣ, ಆಸ್ಪತ್ರೆಗಳು ಮತ್ತು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.
೩. ಮಸೀದಿಯ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಶಾಹಿ ಇಮಾಮ್ (ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವವರು) ಮತ್ತು ಅವರ ಸಂಬಂಧಿಕರು ಅಕ್ರಮ ಕಟ್ಟಡಗಳನ್ನು ನಿರ್ಮಿಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇಮಾಮ್, ಅವರ ಕುಟುಂಬದವರು ಮತ್ತು ಆಪ್ತರು ಮಸೀದಿಯನ್ನು ವೈಯಕ್ತಿಕ ಆದಾಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದು ‘ಧಾರ್ಮಿಕ ಪವಿತ್ರತೆ ಮತ್ತು ಪುರಾತತ್ವ ಪರಂಪರೆ ಸಂರಕ್ಷಣಾ ನಿಯಮ’ ಹಾಗೂ ದೆಹಲಿ ಮಹಾನಗರ ಪಾಲಿಕೆಯ ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !