|

ಫಿರೋಜಾಬಾದ್ (ಉತ್ತರ ಪ್ರದೇಶ) – ಫಿರೋಜಾಬಾದ್‌ನಲ್ಲಿ ಶ್ರೀರಾಮ ಮಂದಿರದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಪ್ರಸಾರವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆಕ್ರೋಶದ ಅಲೆ ಎದ್ದಿದೆ. ಡೌರಿ ಗ್ರಾಮದ ರಶೀದ್ ಎಂಬ ಮುಸ್ಲಿಂ ಯುವಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಯಾವ ದಿನ ಭಾರತದಲ್ಲಿ ಮುಸ್ಲಿಂ ಪ್ರಧಾನ ಮಂತ್ರಿಯಾಗುತ್ತಾರೋ, ಆ ದಿನ ರಾಮ ಮಂದಿರವನ್ನು ಕೆಡವಲಾಗುವುದು” ಎಂದು ಹೇಳಿದ್ದನು. ಈ ಹೇಳಿಕೆಯನ್ನು ಖಂಡಿಸಲು ಬಜರಂಗದಳದ ಜಿಲ್ಲಾಧ್ಯಕ್ಷ ಶುಭಂ ಪ್ರತಾಪ್ ಸಿಂಗ್ ನೇತೃತ್ವದಲ್ಲಿ ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಡೌರಿ ಗ್ರಾಮಕ್ಕೆ ತಲುಪಿದರು. ಕಾರ್ಯಕರ್ತರು ಆರೋಪಿ ಯುವಕನೊಂದಿಗೆ ಪೋಸ್ಟ್ ಬಗ್ಗೆ ಚರ್ಚಿಸಲು ಮುಂದಾದಾಗ, ಮುಸ್ಲಿಂ ಸಮುದಾಯದ ಜನರು ಕಾರ್ಯಕರ್ತರನ್ನು ನಾಲ್ಕೂ ಕಡೆಯಿಂದ ಸುತ್ತುವರಿದು ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿದರು.
ಈ ಘಟನೆಯಲ್ಲಿ ಬಜರಂಗದಳದ ಮೂವರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕೆಲವು ಕಾರ್ಯಕರ್ತರು ಹೇಗೋ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರೂ ಸಹ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಓಡಬೇಕಾಯಿತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಜಾವಲಿ ಪೊಲೀಸ್ ಠಾಣೆಯಿಂದ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ರವಾನಿಸಲಾಯಿತು.
೧. ಮುಸ್ಲಿಂ ಗುಂಪು ಬಜರಂಗದಳದ ಕಾರ್ಯಕರ್ತರ ದ್ವಿಚಕ್ರ ವಾಹನಗಳನ್ನು ಧ್ವಂಸಗೊಳಿಸಿದೆ.
೨. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರು ಮತ್ತು ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು.
೩. ಈ ಘಟನೆಯ ನಂತರ ಡೌರಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
೪. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ದೀಕ್ಷಿತ್ ತಿಳಿಸಿದ್ದಾರೆ. (ಕೇವಲ ಮೊಕದ್ದಮೆ ದಾಖಲಿಸಿದರೆ ಸಾಲದು, ಸಮಾಜದಲ್ಲಿ ಕೋಮು ದ್ವೇಷ ಹರಡುವ ಇಂತಹ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜೈಲಿಗಟ್ಟಬೇಕು! – ಸಂಪಾದಕರು).
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram