ಪಾಕಿಸ್ತಾನದವರೆಗೆ ರಸ್ತೆಯನ್ನು ನಿರ್ಮಿಸುತ್ತಿರುವ ಚೀನಾ!

ಬೀಜಿಂಗ್ (ಚೀನಾ): ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಶಕ್ಸಗಾಮ್ ಕಣಿವೆಯ ಪ್ರದೇಶವು ತನಗೆ ಸೇರಿದ್ದು ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿದೆ . ಈ ಕಣಿವೆಯ ಮೂಲಕ ಚೀನಾವು ಪಾಕಿಸ್ತಾನಕ್ಕೆ ಸಂಪರ್ಕ ಕಲ್ಪಿಸಲು ‘ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ರಸ್ತೆಯನ್ನು ನಿರ್ಮಿಸುತ್ತಿದೆ. ಪಾಕಿಸ್ತಾನವು 1948 ರಲ್ಲಿ ಶಕ್ಸಗಾಮ್ ಕಣಿವೆಯ ಮೇಲೆ ಅಕ್ರಮ ನಿಯಂತ್ರಣ ಸಾಧಿಸಿತ್ತು ಮತ್ತು 1963 ರಲ್ಲಿ ಈ ಪ್ರದೇಶವನ್ನು ಚೀನಾಕ್ಕೆ ಹಸ್ತಾಂತರಿಸಿತ್ತು.
‘ತನ್ನ ಪ್ರದೇಶದಲ್ಲಿ ಮೂಲಸೌಕರ್ಯ ನಿರ್ಮಿಸುವುದು ಚೀನಾದ ಹಕ್ಕು!’(ಅಂತೆ)
ಚೀನಾ ಸರಕಾರದ ಮುಖವಾಣಿ ‘ಗ್ಲೋಬಲ್ ಟೈಮ್ಸ್’ ಪ್ರಕಾರ, ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾವೋ ನಿಂಗ್ ಅವರು, “ಯಾವ ಪ್ರದೇಶದ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗುತ್ತಿದೆಯೋ, ಅದು ಚೀನಾದ ಭಾಗವಾಗಿದೆ. ತನ್ನ ಪ್ರದೇಶದಲ್ಲಿ ಮೂಲಸೌಕರ್ಯಗಳನ್ನು ನಿರ್ಮಿಸುವುದು ಚೀನಾದ ಹಕ್ಕು ಮತ್ತು ಇದರ ಬಗ್ಗೆ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ. ಚೀನಾ ಮತ್ತು ಪಾಕಿಸ್ತಾನಗಳು 1960 ರ ದಶಕದಲ್ಲಿ ಗಡಿ ಒಪ್ಪಂದ ಮಾಡಿಕೊಂಡಿದ್ದವು ಮತ್ತು ಎರಡೂ ದೇಶಗಳ ನಡುವೆ ಗಡಿಯನ್ನು ನಿರ್ಧರಿಸಲಾಗಿತ್ತು. ಈ ನಿರ್ಧಾರವನ್ನು ಎರಡು ಸಾರ್ವಭೌಮ ರಾಷ್ಟ್ರಗಳು ತಮ್ಮ ಹಕ್ಕುಗಳಿಗನುಗುಣವಾಗಿ ತೆಗೆದುಕೊಂಡಿವೆ ಎಂದು ಅವರು ತಿಳಿಸಿದ್ದಾರೆ.
ಹೆದ್ದಾರಿ ನಿರ್ಮಾಣಕ್ಕೂ ಕಾಶ್ಮೀರ ವಿಷಯದ ಮೇಲಿನ ಚೀನಾದ ನಿಲುವಿಗೂ ಸಂಬಂಧವಿಲ್ಲ!
ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಕುರಿತು ಮಾವೋ ನಿಂಗ್ ಮಾತನಾಡಿ, “ಇದು ಒಂದು ಆರ್ಥಿಕ ಸಹಕಾರ ಯೋಜನೆಯಾಗಿದ್ದು, ಸ್ಥಳೀಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವುದು ಇದರ ಉದ್ದೇಶವಾಗಿದೆ. ಚೀನಾ-ಪಾಕಿಸ್ತಾನ್ ಗಡಿ ಒಪ್ಪಂದ ಮತ್ತು ಹೆದ್ದಾರಿ ನಿರ್ಮಾಣಕ್ಕೂ ಕಾಶ್ಮೀರ ವಿಷಯದ ಮೇಲಿನ ಚೀನಾದ ನಿಲುವಿಗೂ ಯಾವುದೇ ಸಂಬಂಧವಿಲ್ಲ ಮತ್ತು ಈ ವಿಷಯದಲ್ಲಿ ಚೀನಾದ ನಿಲುವು ಮೊದಲಿನಂತೆಯೇ ಇದೆ. ಕಾಶ್ಮೀರವು ಇತಿಹಾಸಕ್ಕೆ ಸಂಬಂಧಿಸಿದ ಒಂದು ಸಂಕೀರ್ಣ ಸಮಸ್ಯೆಯಾಗಿದ್ದು, ಇದನ್ನು ಭಾರತ ಮತ್ತು ಪಾಕಿಸ್ತಾನಗಳು ನೇರವಾಗಿ ಪರಸ್ಪರ ಚರ್ಚೆಯ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು. ಚೀನಾವು ವಿಶ್ವಸಂಸ್ಥೆಯ ನಿರ್ಣಯಗಳನ್ನು ಮತ್ತು ಅಂತರಾಷ್ಟ್ರೀಯ ಒಪ್ಪಂದಗಳನ್ನು ಗೌರವಿಸುತ್ತದೆ,” ಎಂದಿದ್ದಾರೆ.
ನಾವು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಯೋಜನೆಯನ್ನು ಮಾನ್ಯ ಮಾಡುವುದಿಲ್ಲ! – ಭಾರತ
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಜನವರಿ 9 ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಶಕ್ಸಗಾಮ್ ಕಣಿವೆಯು ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. “ನಾವು 1963 ರಲ್ಲಿ ನಡೆದ ಚೀನಾ-ಪಾಕಿಸ್ತಾನ ಗಡಿ ಒಪ್ಪಂದವನ್ನು ಎಂದಿಗೂ ಮಾನ್ಯ ಮಾಡಿಲ್ಲ. ನಾವು ಆ ಒಪ್ಪಂದವನ್ನು ಅಕ್ರಮವೆಂದು ಪರಿಗಣಿಸುತ್ತೇವೆ; ಏಕೆಂದರೆ ಅದು ಪಾಕಿಸ್ತಾನದ ಅಕ್ರಮ ನಿಯಂತ್ರಣದಲ್ಲಿರುವ ಭಾರತದ ಭೂಭಾಗದ ಮೂಲಕ ಹಾದುಹೋಗುತ್ತದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗಗಳಾಗಿವೆ. ಈ ವಿಷಯವನ್ನು ಪಾಕಿಸ್ತಾನ ಮತ್ತು ಚೀನಾ ಎರಡಕ್ಕೂ ಹಲವು ಬಾರಿ ಸ್ಪಷ್ಟವಾಗಿ ತಿಳಿಸಲಾಗಿದೆ,” ಎಂದು ಅವರು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಜಮ್ಮು ನ್ಯಾಯಾಲಯದಿಂದ ಪೊಲೀಸರಿಗೆ ದಾಖಲೆಗಳನ್ನು ಸಲ್ಲಿಸಲು ಆದೇಶ! : Vaishno Devi Fake Silver
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim