ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯಗಳನ್ನು ಕೂಡಲೇ ದುರಸ್ತಿ ಮಾಡಿ ಕ್ರಮ ಕೈಗೊಳ್ಳಿ!
![]() |
![]() |
![]() |
ಕೋಲ್ಹಾಪುರ, ಜನವರಿ ೧೩ (ವಾರ್ತೆ) – ಶೌಚಾಲಯಗಳು ಯಾವುದೇ ನಗರದ ಅಗತ್ಯ ಸೌಲಭ್ಯವಾಗಿದ್ದು, ಉತ್ತಮ ಸ್ಥಿತಿಯಲ್ಲಿರುವುದು ಮುಖ್ಯವಾಗಿದೆ. ಹೀಗಿದ್ದರೂ, ಸಾಡೇತೀನ್ ಶಕ್ತಿಪೀಠಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮಿ ದೇವಿಯ ಮಂದಿರವಿರುವ ಕೋಲ್ಹಾಪುರ ನಗರದಲ್ಲಿ ಮಹಾನಗರ ಪಾಲಿಕೆ, ಬಿಂದು ಚೌಕ್, ಮುಂಬಯಿ ಹೈಕೋರ್ಟ್ ಸರ್ಕಿಟ್ ಬೆಂಚ್, ಛತ್ರಪತಿ ಪ್ರಮಿಲಾರಾಜೆ ಆಸ್ಪತ್ರೆ, ರೈಲ್ವೆ ನಿಲ್ದಾಣದ ಆವರಣ, ಶಾಹುಪುರಿ, ರಾಜಾರಾಂಪುರಿ ಸೇರಿದಂತೆ ನಗರದ ಅನೇಕ ಪ್ರಮುಖ ಮತ್ತು ಜನನಿಬಿಡ ಪ್ರದೇಶಗಳಲ್ಲಿರುವ ಸಾರ್ವಜನಿಕ ಶೌಚಾಲಯಗಳು ಹಾಗೂ ಮೂತ್ರಾಲಯಗಳ ಸ್ಥಿತಿ ಅತ್ಯಂತ ಗಂಭೀರವಾಗಿರುವುದು ಕಂಡುಬಂದಿದೆ.
ಈ ಬಗ್ಗೆ ಮಹಾನಗರ ಪಾಲಿಕೆಯನ್ನು ವಿಚಾರಿಸಿದಾಗ, “ಆರೋಗ್ಯ ಇಲಾಖೆಯ ಸಿಬ್ಬಂದಿ ಅವುಗಳನ್ನು ಸ್ವಚ್ಛಗೊಳಿಸುತ್ತಾರೆ” ಎಂಬ ಉತ್ತರ ನೀಡಲಾಯಿತು. ಆದರೆ ಈ ಶೌಚಾಲಯಗಳ ಸ್ಥಿತಿ ನೋಡಿದರೆ, ‘ಸಿಬ್ಬಂದಿಗಳು ಏನು ಸ್ವಚ್ಛ ಮಾಡುತ್ತಾರೆ?’ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ, ಸಾರ್ವಜನಿಕ ಶೌಚಾಲಯಗಳನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಮತ್ತು ಈ ದುಃಸ್ಥಿತಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ವಿಧಿಜ್ಞ ಪರಿಷತ್ತು ಕೋಲ್ಹಾಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದೆ.
ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾದ ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ್ ಅವರು ಪತ್ರದಲ್ಲಿ ಆಗ್ರಹಿಸಿದ ಬೇಡಿಕೆಗಳು:
೧. ಮಹಾನಗರ ಪಾಲಿಕೆಯು ಎಲ್ಲಾ ಸಾರ್ವಜನಿಕ ಮೂತ್ರಾಲಯ ಮತ್ತು ಶೌಚಾಲಯಗಳನ್ನು ಪರಿಶೀಲಿಸಿ, ತಕ್ಷಣವೇ ಸ್ವಚ್ಛತೆ ಮತ್ತು ಅಗತ್ಯವಿರುವ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು.
೨. ದುರಸ್ತಿಗಳನ್ನು ಗುರುತಿಸಲು ಅನುಕೂಲವಾಗುವಂತೆ ಅಗತ್ಯ ಮಾರ್ಗದರ್ಶಕ ಫಲಕಗಳನ್ನು ಅಳವಡಿಸಬೇಕು. ಈ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಮಾಡುವ ಗುತ್ತಿಗೆದಾರರಿಂದಲೇ ದುರಸ್ತಿ ವೆಚ್ಚವನ್ನು ವಸೂಲಿ ಮಾಡಬೇಕು.
೩. ಸಾರ್ವಜನಿಕ ಆರೋಗ್ಯವನ್ನು ಈ ರೀತಿ ನಿರ್ಲಕ್ಷಿಸುತ್ತಿರುವ ಆಡಳಿತಾಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.
ಸಂಪಾದಕೀಯ ನಿಲುವು
|



‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !