ಲಂಡನ್ (ಬ್ರಿಟನ್): ಬ್ರಿಟನ್‌ನ ಕನ್ಸರ್ವೇಟಿವ್ (ಹುಜೂರ್) ಪಕ್ಷದ ನಾಯಕ ಮತ್ತು ಸಂಸದ ಬಾಬ್ ಬ್ಲ್ಯಾಕ್‌ಮನ್ ಅವರು ಬಾಂಗ್ಲಾದೇಶದ ಪ್ರಸ್ತುತ ಗಂಭೀರ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಯುನೂಸ್ ನೇತೃತ್ವದ ಮಧ್ಯಂತರ ಸರಕಾರದ ಅವಧಿಯಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವು ವೇಗವಾಗಿ ಹೆಚ್ಚುತ್ತಿದೆ ಎಂದು ಅವರು ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸಂಸತ್ತಿನಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದ ರಸ್ತೆಗಳಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದೆ, ಅವರ ಮನೆಗಳು ಮತ್ತು ದೇವಸ್ಥಾನಗಳಿಗೆ ಬೆಂಕಿ ಹಚ್ಚಲಾಗುತ್ತಿದೆ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತರು ಕೂಡ ಇಂತಹದ್ದೇ ಹಿಂಸಾಚಾರವನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಫೆಬ್ರವರಿ 12 ರಂದು ನಡೆಯಲಿರುವ ಚುನಾವಣೆಗಳ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ
ಬಾಂಗ್ಲಾದೇಶದಲ್ಲಿ ಫೆಬ್ರವರಿ 12 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳು ಪ್ರಜಾಪ್ರಭುತ್ವದ ಮೇಲಿನ ಗಂಭೀರ ಸಂಶಯಗಳ ನಡುವೆ ನಡೆಯುತ್ತಿವೆ ಎಂದು ಬ್ಲ್ಯಾಕ್‌ಮನ್ ಎಚ್ಚರಿಸಿದ್ದಾರೆ. ಪ್ರಮುಖ ರಾಜಕೀಯ ಪಕ್ಷವಾದ ‘ಅವಾಮಿ ಲೀಗ್’ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸಲಾಗಿದೆ, ಆದರೆ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಈ ಪಕ್ಷಕ್ಕೆ ಸುಮಾರು ಶೇ. 30% ರಷ್ಟು ಮತಗಳು ಸಿಗುವ ಸಾಧ್ಯತೆಯಿದೆ ಎಂದು ಕಂಡುಬರುತ್ತಿದೆ. ಇದರೊಂದಿಗೆ, ಇಸ್ಲಾಮಿಕ್ ಮೂಲಭೂತವಾದಿಗಳು ಜನಾಭಿಪ್ರಾಯ ಸಂಗ್ರಹಣೆಗೆ ಬೇಡಿಕೆ ಇಟ್ಟಿದ್ದು, ಇದರಿಂದ ಬಾಂಗ್ಲಾದೇಶದ ಸಂವಿಧಾನದಲ್ಲಿ ಶಾಶ್ವತ ಬದಲಾವಣೆಗಳಾಗಬಹುದೆಂಬ ಭೀತಿಯನ್ನು ಬ್ಲ್ಯಾಕ್‌ಮನ್ ವ್ಯಕ್ತಪಡಿಸಿದ್ದಾರೆ.
ಬ್ರಿಟನ್ ಸರಕಾರದಿಂದ ಕಠಿಣ ನಿಲುವಿಗೆ ಒತ್ತಾಯ
ಮುಂದಿನ ವಾರ ಬ್ರಿಟನ್‌ನ ವಿದೇಶಾಂಗ ಕಾರ್ಯದರ್ಶಿಗಳು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಮತ್ತು “ಬಾಂಗ್ಲಾದೇಶದ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಬ್ರಿಟನ್ ಸರಕಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ?” ಹಾಗೂ “ದಕ್ಷಿಣ ಏಷ್ಯಾದ ಈ ದೇಶದಲ್ಲಿ ನಿಷ್ಪಕ್ಷಪಾತ, ಮುಕ್ತ ಮತ್ತು ಎಲ್ಲರನ್ನೂ ಒಳಗೊಂಡ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುವುದು?” ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಬ್ಲ್ಯಾಕ್‌ಮನ್ ಒತ್ತಾಯಿಸಿದರು.
ಸರ್ವಪಕ್ಷ ಸಂಸದರ ಜಂಟಿ ಅಭಿಪ್ರಾಯ
ಜಂಟಿ ಹೇಳಿಕೆಯಲ್ಲಿ ವಿವಿಧ ಪಕ್ಷಗಳ ಬ್ರಿಟಿಷ್ ಸಂಸದರು ಬಾಂಗ್ಲಾದೇಶದ ಮಧ್ಯಂತರ ಸರಕಾರವನ್ನು ಟೀಕಿಸಿದರು. ಸಂಸದರಾದ ಬಾಬ್ ಬ್ಲ್ಯಾಕ್‌ಮನ್, ಜಿಮ್ ಶಾನನ್, ಜಸ್ ಅಟ್ವಾಲ್ ಮತ್ತು ಕ್ರಿಸ್ ಲಾ ಅವರು ಬಾಂಗ್ಲಾದೇಶ ಸರ್ಕಾರದ ವಿರುದ್ಧ ಕಟುವಾದ ಪ್ರತಿಕ್ರಿಯೆ ನೀಡಿದರು. ಬಾಂಗ್ಲಾದೇಶದ ಮತದಾರರ ಮೇಲೆ ಇಂತಹ ನಿರ್ಬಂಧಗಳನ್ನು ಹೇರಬಾರದು ಎಂದು ಅವರು ಆಗ್ರಹಿಸಿದರು. “ದೊಡ್ಡ ರಾಜಕೀಯ ಪಕ್ಷಗಳನ್ನು ಹೊರಗಿಟ್ಟು ನಡೆಯುವ ಯಾವುದೇ ಚುನಾವಣೆಯನ್ನು ಪ್ರಜಾಪ್ರಭುತ್ವ ಎಂದು ಕರೆಯಲು ಸಾಧ್ಯವಿಲ್ಲ” ಎಂದು ಅವರು ಟೀಕಿಸಿದರು.

ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !