ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪ

ತಿರುವನಂತಪುರಂ (ಕೇರಳ) – ಕೇಂದ್ರದ ಬಿಜೆಪಿ ಸರಕಾರವು ಮುಸ್ಲಿಮರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಕೇಂದ್ರ ಸರಕಾರದ ನೀತಿಗಳಿಂದಾಗಿ ಮುಸ್ಲಿಂ ಸಮುದಾಯವನ್ನು ಮುಖ್ಯವಾಹಿನಿಯಿಂದ ದೂರವಿಡಲಾಗುತ್ತಿದೆ ಎಂದು ಅವರು ದೂರಿದರು. ‘ಕೇರಳ ಮುಸ್ಲಿಂ ಜಮಾತ್’ ವತಿಯಿಂದ ಆಯೋಜಿಸಲಾಗಿದ್ದ ‘ಕೇರಳ ಯಾತ್ರೆ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಈ ಯಾತ್ರೆಯು ಜನವರಿ 1 ರಂದು ಕಾಸರಗೋಡಿನಿಂದ ಪ್ರಾರಂಭವಾಗಿ ಇಡೀ ರಾಜ್ಯದಾದ್ಯಂತ ಸಂಚರಿಸಿ ತಿರುವನಂತಪುರಂನಲ್ಲಿ ಮುಕ್ತಾಯಗೊಂಡಿತು.
“ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಯುತ್ತಿದೆ!”( ಅಂತೆ)
ಮುಖ್ಯಮಂತ್ರಿ ವಿಜಯನ್ ಮಾತನಾಡಿ, “ಇಂದು ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳು ಅಪಾಯದಲ್ಲಿವೆ. ದೇಶಾದ್ಯಂತ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಹಾಗೂ ಅವರ ಆರಾಧನಾ ಮಂದಿರಗಳ ಮೇಲೆ ದಾಳಿಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಜಾತ್ಯತೀತತೆಯನ್ನು ಬಲಪಡಿಸದೆ ಈ ಸವಾಲನ್ನು ಎದುರಿಸಲು ಸಾಧ್ಯವಿಲ್ಲ,” ಎಂದರು.
( ಕೇವಲ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಲ್ಲ, ಬದಲಿಗೆ ಹಿಂದೂಗಳ ದೇವಸ್ಥಾನಗಳ ಮೇಲೆಯೂ ದಾಳಿಗಳು ನಡೆಯುತ್ತಿವೆ. ದೇಶದಾದ್ಯಂತ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಇದರಲ್ಲಿ ಮತಾಂಧ ಮುಸ್ಲಿಮರ ಪಾತ್ರವೇ ಹೆಚ್ಚಿದೆ ಎಂಬುದು ತಿಳಿದುಬರುತ್ತದೆ. ಹೀಗಿದ್ದರೂ ಮುಖ್ಯಮಂತ್ರಿ ವಿಜಯನ್ ಅವರು ಉದ್ದೇಶಪೂರ್ವಕವಾಗಿ ಸುಳ್ಳು ಹೇಳುವ ಮೂಲಕ ಹಿಂದೂಗಳನ್ನು ಆರೋಪಿಗಳನ್ನಾಗಿ ಮತ್ತು ಇತರ ಧರ್ಮದವರನ್ನು ನಿರಪರಾಧಿಗಳನ್ನಾಗಿ ಬಿಂಬಿಸುತ್ತಿದ್ದಾರೆ! – ಸಂಪಾದಕರು)
ಇಂತಹ ಪರಿಸ್ಥಿತಿಯಲ್ಲಿ ಜಾತ್ಯತೀತತೆ ಹೆಚ್ಚು ಗಟ್ಟಿಗೊಳಿಸದೆ ಈ ಸವಾಲುಗಳನ್ನು ಎದುರಿಸಲು ಸಾಧ್ಯವಿಲ್ಲ. “ಕೇರಳದಲ್ಲಿ ಹಿಂದೆ ಹಲವಾರು ಕೋಮು ಗಲಭೆಗಳು ನಡೆದಿದ್ದವು; ಆದರೆ ನಮ್ಮ ಮೈತ್ರಿ ಸರಕಾರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಈಗ ಇಂತಹ ಘಟನೆಗಳು ನಿಂತಿವೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಶಕ್ತಿಗಳ ಬಗ್ಗೆ ಜನರನ್ನು ಜಾಗೃತಗೊಳಿಸುವ ಅಗತ್ಯವಿದೆ,” ಎಂದು ಹೇಳಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !