
ನವದೆಹಲಿ: 45 ವರ್ಷದ ನಿತಿನ್ ನವೀನ್ ಅವರು ಜನವರಿ 20 ರಂದು ಅಧಿಕೃತವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾಹ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು. ಅಧಿಕಾರ ಸ್ವೀಕರಿಸುವ ಮೊದಲು, ನವೀನ್ ಅವರು ದೆಹಲಿಯ ಝಂಡೇವಾಲನ್ ದೇವಸ್ಥಾನ, ವಾಲ್ಮೀಕಿ ದೇವಸ್ಥಾನ ಮತ್ತು ಕಾನ್ ನಾಟ್ ಪ್ಲೇಸ್ನಲ್ಲಿರುವ ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಅಲ್ಲದೆ, ಅವರು ಗುರುದ್ವಾರ ಬಾಂಗ್ಲಾ ಸಾಹಿಬ್ಗೂ ಭೇಟಿ ನೀಡಿದರು.
ಯಾರು ಈ ನಿತಿನ್ ನವೀನ್?
ನಿತಿನ್ ನವೀನ್ ಅವರು ಬಿಹಾರದ ರಾಜಧಾನಿ ಪಾಟಲಿಪುತ್ರದಲ್ಲಿ (ಪಾಟ್ನಾ) ಜನಿಸಿದರು. ಇವರ ತಂದೆ ಕಿಶೋರ್ ಪ್ರಸಾದ್ ಸಿನ್ಹಾ ಅವರು ಬಿಜೆಪಿಯ ಹಿರಿಯ ನಾಯಕ ಮತ್ತು ಬಂಕಿಪುರದ ಮಾಜಿ ಶಾಸಕರಾಗಿದ್ದರು. 2006 ರಲ್ಲಿ ತಂದೆಯ ನಿಧನದ ನಂತರ, ನಿತಿನ್ ನವೀನ್ ಅವರು ಬಂಕಿಪುರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾದರು. 2025 ರವರೆಗೆ ಅವರು ಸತತ 5 ಬಾರಿ ಇಲ್ಲಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಅವರು ಬಿಹಾರ ಸರಕಾರದಲ್ಲಿ ಲೋಕೋಪಯೋಗಿ (ಕಟ್ಟಡ ನಿರ್ಮಾಣ) ಸಚಿವರಾಗಿದ್ದಾರೆ. 2021 ರಿಂದ 2022 ರ ಅವಧಿಯಲ್ಲೂ ಅವರು ಇದೇ ಖಾತೆಯನ್ನು ನಿರ್ವಹಿಸಿದ್ದರು. ಈ ಹಿಂದೆ ಅವರು ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಬಿಹಾರ ರಾಜ್ಯದ ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ