
ಮುಂಬಯಿ – ಕರ್ಣಾವತಿಯ (ಗುಜರಾತ್) ಸನಾತನದ ೧೨೭ ನೇ ಸಂತ ಪೂಜ್ಯ ಶ್ರೀಪಾದ ನರಹರ ಹರ್ಷೆ (೯೧ ವರ್ಷ) ಅವರು ಜನವರಿ ೧೫ ರಂದು ಮಧ್ಯಾಹ್ನ ೨.೩೦ ಕ್ಕೆ ದೇಹತ್ಯಾಗ ಮಾಡಿದರು. ೨ ನವೆಂಬರ್ ೨೦೨೩ ರಂದು ಅವರು ಸಂತ ಪದವಿಯನ್ನು ಅಲಂಕರಿಸಿದ್ದರು.
ಜನವರಿ ೧೬ ರಂದು ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಸನಾತನ ಸಂಸ್ಥೆಯ ಮೂಲಕ ಸಾಧನೆಯನ್ನು ಪ್ರಾರಂಭಿಸಿದ ನಂತರ, ಅವರು ಸಮಾಜದಲ್ಲಿ ಅಧ್ಯಾತ್ಮದ ಪ್ರಸಾರ ಮಾಡುವುದು, ಗ್ರಂಥ ಪ್ರದರ್ಶನಗಳನ್ನು ಏರ್ಪಡಿಸುವುದು, ಸಾಧಕರನ್ನು ಭೇಟಿ ಮಾಡಿ ಸಾಧನೆಗೆ ಮಾರ್ಗದರ್ಶನ ಮಾಡುವುದು, ಸತ್ಸಂಗಗಳನ್ನು ನಡೆಸುವುದು ಮತ್ತು ಗ್ರಂಥಗಳ ವರದಿಗಳನ್ನು ಸಿದ್ಧಪಡಿಸುವುದು ಮುಂತಾದ ವಿವಿಧ ಸೇವೆಗಳನ್ನು ಮಾಡಿದರು. ಅವರ ನಂತರ ಅವರ ಪತ್ನಿ ಶೀಲಾ ಹರ್ಷೆ (ಆಧ್ಯಾತ್ಮಿಕ ಮಟ್ಟ ಶೇ. ೬೬), ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ಹೀಗೆ ಪರಿವಾರ ಇದೆ.
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ