
ಪಣಜಿ, ಜನವರಿ ೨೧ (ಸುದ್ದಿ) – ಪರ್ವರಿಯ ಉದ್ಯಮಿ ಮತ್ತು ‘ಹೋಲಿ’ (HELPFUL ORGANIZATION FOR LIKEMINDED INDIANS) ಸಾಮಾಜಿಕ ಸಂಸ್ಥೆಯ ಶ್ರೀ. ಕಮಲಾಕಾಂತ್ ಚತುರ್ವೇದಿ ಅವರಿಗೆ ಜನವರಿ ೧೬ ರಂದು ‘ವಿಂಧ್ಯ ಗೌರವ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಧ್ಯಪ್ರದೇಶದ ಭೋಪಾಲ್‌ನ ‘ಪರಶುರಾಮ ಕಲ್ಯಾಣ ಮಂಡಳಿ’ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ‘ಪರಶುರಾಮ ಕಲ್ಯಾಣ ಮಂಡಳಿ’ಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ರಾಜೋರಿಯಾ, ಕೇಂದ್ರ ಸಚಿವ ಟೇಕಮ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಮುಂಬಯಿನ ‘ಸ್ನೇಹ ಇವೆಂಟ್ ಮ್ಯಾನೇಜ್‌ಮೆಂಟ್’ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಶ್ರೀ. ಕಮಲಾಕಾಂತ್ ಚತುರ್ವೇದಿ ಅವರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಇತರ ೯ ಜನರಿಗೂ ಈ ಪ್ರಶಸ್ತಿ ನೀಡಲಾಯಿತು. ಶ್ರೀ. ಚತುರ್ವೇದಿ ಅವರು ಧರ್ಮ ಪ್ರಚಾರಕ್ಕಾಗಿ ವಿವಿಧ ಕಾರ್ಯಕ್ರಮಗಳಲ್ಲಿ ೨ ಸಾವಿರ ಬೆಳ್ಳಿ ನಾಣ್ಯಗಳು, ೫೦೦ ಶ್ರೀರಾಮಚರಿತಮಾನಸ ಗ್ರಂಥಗಳು ಮತ್ತು ಸುಮಾರು ೧ ಸಾವಿರ ಭಗವದ್ಗೀತೆ ಪುಸ್ತಕಗಳನ್ನು ಹಂಚಿದ್ದಾರೆ. ಭಾರತದ ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಜಯಂತಿ ಮತ್ತು ಭಾರತರತ್ನ ನಾನಾಜಿ ದೇಶಮುಖ್ ಅವರ ಪುಣ್ಯತಿಥಿಯ ಸಂದರ್ಭಗಳಲ್ಲಿಯೂ ಅವರು ಧರ್ಮ ಪ್ರಸಾರದ ಉದ್ದೇಶದಿಂದ ಈ ಕಾರ್ಯಗಳನ್ನು ಮಾಡಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !