
ಪ್ರಯಾಗರಾಜ್ (ಉತ್ತರ ಪ್ರದೇಶ) – ಉತ್ತರ ಪ್ರದೇಶದಲ್ಲಿ ಅನಧಿಕೃತವಾಗಿರುವ ಮದರಸಾಗಳಿಗೆ ಅನುದಾನ ನೀಡಲು ರಾಜ್ಯ ಸರಕಾರವು ನಿರಾಕರಿಸಬಹುದು; ಆದರೆ ಅವುಗಳ ಕಾರ್ಯಚಟುವಟಿಕೆಯನ್ನು ನಿಲ್ಲಿಸುವ ಕಾನೂನಾತ್ಮಕ ಅಧಿಕಾರ ಸರಕಾರಕ್ಕಿಲ್ಲ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ.
Rule of law clarified. ⚖️
The Allahabad High Court ruled that the Uttar Pradesh government cannot shut down unauthorised madrasas, but can deny them government grants. pic.twitter.com/Bku74fXvHl
— Sanatan Prabhat (@SanatanPrabhat) January 22, 2026
ಶ್ರಾವಸ್ತಿ ಜಿಲ್ಲೆಯ ‘ಮದರಸಾ ಅಹ್ಲೆ ಸುನ್ನತ್ ಇಮಾಮ್ ಅಹ್ಮದ್ ರಜಾ’ ಎಂಬ ಮದರಸಾಗೆ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಯು, ‘ನಿಮ್ಮ ಮದರಸಾ ಅನಧಿಕೃತವಾಗಿದ್ದು, ಕೂಡಲೇ ಅದರ ಕಾರ್ಯಚಟುವಟಿಕೆಯನ್ನು ನಿಲ್ಲಿಸಬೇಕು’ ಎಂದು ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮದರಸಾ ಆಡಳಿತ ಮಂಡಳಿಯು ನ್ಯಾಯಾಲಯದ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ಧಾರ ಪ್ರಕಟಿಸಿದೆ.
ನ್ಯಾಯಾಲಯದ ತೀರ್ಪಿನಲ್ಲಿ ಏನಿದೆ?
ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ೨೦೧೬ ರ ನಿಯಮಾವಳಿಯ ಪ್ರಕಾರ, ಮದರಸಾಗಳಿಗೆ ಕೇವಲ ಸರಕಾರಿ ಅನುದಾನವನ್ನು ನಿರಾಕರಿಸಲು ಮಾತ್ರ ಅವಕಾಶವಿದೆ. ಆದರೆ ಮಾನ್ಯತೆ ಇಲ್ಲ ಎಂಬ ಕಾರಣ ನೀಡಿ ಮದರಸಾವನ್ನು ಮುಚ್ಚಲು ನಿಯಮಾವಳಿಯಲ್ಲಿ ಯಾವುದೇ ಅವಕಾಶವಿಲ್ಲ. ಆದ್ದರಿಂದ ಇಂತಹ ಸಂಸ್ಥೆಗಳ ಶೈಕ್ಷಣಿಕ ಕಾರ್ಯಚಟುವಟಿಕೆಯನ್ನು ತಡೆಯುವ ಅಧಿಕಾರ ಸರಕಾರಕ್ಕೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ