ಸರಕು ಸಾಗಣೆ ರೈಲಿಗೆ ಹಾನಿ, ಚಾಲಕನಿಗೆ ಗಾಯ

ಚಂಡೀಗಢ – ಪಂಜಾಬ್‌ನ ಫತೇಘಡ ಸಾಹಿಬ್ ಜಿಲ್ಲೆಯಲ್ಲಿ ಗಣರಾಜ್ಯೋತ್ಸವದ ಮುನ್ನ ರೈಲ್ವೆ ಹಳಿಯ ಮೇಲೆ ಬಾಂಬ್ ಸ್ಫೋಟಿಸಿದ ಘಟನೆ ನಡೆದಿದೆ. ಈ ಸ್ಫೋಟವು ಖಾನ್‌ಪುರ ಸಮೀಪದ ರೈಲ್ವೆ ಹಳಿಯ ಮೇಲೆ ರಾತ್ರಿ 10 ಗಂಟೆಗೆ ಸಂಭವಿಸಿದೆ. ಸ್ಫೋಟದ ಸಮಯದಲ್ಲಿ ಅಲ್ಲಿಂದ ಸರಕು ಸಾಗಣೆ ರೈಲೊಂದು ಹಾದುಹೋಗುತ್ತಿತ್ತು. ಸ್ಫೋಟದ ತೀವ್ರತೆಗೆ ರೈಲಿನ ಇಂಜಿನ್ ಹಾನಿಗೀಡಾಗಿದೆ. ಈ ಅವಘಡದಲ್ಲಿ ರೈಲಿನ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ರೈಲ್ವೆ ಹಳಿಯ ಸುಮಾರು 12 ಅಡಿ ಭಾಗವು ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ಘಟನೆಯ ನಂತರ ಇಡೀ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರೋಪರ್ ವಲಯದ ಉಪ ಮಹಾನಿರೀಕ್ಷಕ (DIG) ನಾನಕ್ ಸಿಂಗ್ ಮಾತನಾಡಿ, “ಇದು ಅತಿ ದೊಡ್ಡ ಸ್ಫೋಟವೇನಲ್ಲ. ಪಂಜಾಬ್ ಪೊಲೀಸರು ವೈಜ್ಞಾನಿಕವಾಗಿ ಇದರ ತನಿಖೆ ನಡೆಸುತ್ತಿದ್ದಾರೆ. ತನಿಖಾ ಸಂಸ್ಥೆಗಳೊಂದಿಗೂ ಸಂಪರ್ಕ ಸಾಧಿಸಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಕರಣವನ್ನು ಭೇದಿಸಲಾಗುವುದು,” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಅಣ್ವಸ್ತ್ರಧಾರಿ ಭಾರತವು ಇಂದಿಗೂ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಹಿಂದೂಗಳ ಎಲ್ಲಾ ಹಬ್ಬಗಳನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”