ಜನಜೀವನ ಅಸ್ತವ್ಯಸ್ತ, ವಿಮಾನ ಮತ್ತು ರಸ್ತೆ ಸಾರಿಗೆ ಸ್ಥಗಿತ

ವಾಷಿಂಗ್ಟನ್ (ಅಮೆರಿಕ) – ಅಮೆರಿಕದಲ್ಲಿ ಕಳೆದ ಕೆಲವು ದಿನಗಳಿಂದ ಸಂಭವಿಸುತ್ತಿರುವ ಭೀಕರ ಹಿಮಪಾತದಿಂದಾಗಿ ದೇಶದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ವಿಪರೀತ ಹಿಮವೃಷ್ಟಿ, ಕೊರೆಯುವ ಚಳಿ ಮತ್ತು ಬಿರುಗಾಳಿಯಿಂದಾಗಿ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ನಾಗರಿಕರು ಮನೆಯಿಂದ ಹೊರಬರದಂತೆ ಆಡಳಿತ ಮಂಡಳಿ ಮನವಿ ಮಾಡಿದೆ. ಹಲವು ಕಡೆಗಳಲ್ಲಿ ತಾಪಮಾನವು ನೀರು ಗಡ್ಡೆಗಟ್ಟುವ ಮಟ್ಟಕ್ಕಿಂತ ಕೆಳಗೆ ಕುಸಿದಿದ್ದು, ರಸ್ತೆಗಳು ಮಂಜಿನಿಂದ ಆವೃತವಾಗಿವೆ. ಇದರ ಪರಿಣಾಮವಾಗಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಅನೇಕ ಅಪಘಾತಗಳು ಸಂಭವಿಸಿವೆ ಎಂದು ವರದಿಯಾಗಿದೆ.
ವಿಮಾನ ಸೇವೆ ಸ್ಥಗಿತ, 30,000 ವಿಮಾನ ಹಾರಾಟಗಳು ರದ್ದು
ದೇಶಾದ್ಯಂತ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸುಮಾರು 30,000 ವಿಮಾನ ಹಾರಾಟಗಳನ್ನು ರದ್ದುಗೊಳಿಸಲಾಗಿದೆ. ಮುಂಬರುವ ಕೆಲವು ದಿನಗಳ ಕಾಲ ಪ್ರಯಾಣದ ಯೋಜನೆಯನ್ನು ಬದಲಾಯಿಸುವಂತೆ ವಿಮಾನಯಾನ ಸಂಸ್ಥೆಗಳು ನಾಗರಿಕರಿಗೆ ಸಲಹೆ ನೀಡಿವೆ.
ವಿದ್ಯುತ್ ಸಂಪರ್ಕ ಕಡಿತ, ಲಕ್ಷಾಂತರ ನಾಗರಿಕರು ಕತ್ತಲಲ್ಲಿ
ಹಿಮಪಾತದಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿದ್ದು, ಅನೇಕ ರಾಜ್ಯಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಲಕ್ಷಾಂತರ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ವಿದ್ಯುತ್ ಇಲ್ಲದ ಕಾರಣ ‘ಹೀಟಿಂಗ್ ಸಿಸ್ಟಮ್’ (ಉಷ್ಣತೆ ನೀಡುವ ವ್ಯವಸ್ಥೆ) ಸ್ಥಗಿತಗೊಂಡಿದ್ದು, ನಾಗರಿಕರ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ಸ್ಥಳೀಯ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸಮರೋಪಾದಿಯಲ್ಲಿ ವಿದ್ಯುತ್ ಪೂರೈಕೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿವೆ. ವಿಪತ್ತು ನಿರ್ವಹಣಾ ಸಂಸ್ಥೆಗಳು ಮತ್ತು ರಕ್ಷಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ. ಹವಾಮಾನ ಸುಧಾರಿಸಲು ಇನ್ನು ಕೆಲವು ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!