ಉಜ್ಜಯಿನಿಯ ಮಹಾಕಾಳೇಶ್ವರ ಮಂದಿರದಲ್ಲಿ ‘ವಿಐಪಿ ದರ್ಶನ’ ನಿಲ್ಲಿಸಲು ಸರ್ವೋಚ್ಚ ನ್ಯಾಯಾಲಯದಿಂದ ನಿರಾಕರಣೆ!

ನವ ದೆಹಲಿ – ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿಯ ಜಗತ್ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ಮಂದಿರದಲ್ಲಿ ‘ವಿವಿಐಪಿ ದರ್ಶನ’ ವ್ಯವಸ್ಥೆಯು ಮುಂದುವರಿಯಲಿದೆ. ಈ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿದೆ. ‘ದೇವಸ್ಥಾನದ ಒಳಗೆ ಯಾರಿಗೆ ಪ್ರವೇಶ ನೀಡಬೇಕು ಮತ್ತು ಯಾರಿಗೆ ನೀಡಬಾರದು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ’ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದರು. ನ್ಯಾಯಾಲಯದ ಈ ಕಠಿಣ ನಿಲುವನ್ನು ಗಮನಿಸಿದ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದರು.
ನಿಜವಾದ ಭಕ್ತರು ಇಂತಹ ಅರ್ಜಿಗಳನ್ನು ಸಲ್ಲಿಸುವುದಿಲ್ಲ! – ನ್ಯಾಯಾಲಯ
ಅರ್ಜಿದಾರ ದರ್ಪಣ ಅವಸ್ಥಿ ಅವರ ಪರವಾಗಿ ವಾದ ಮಂಡಿಸಿದ ನ್ಯಾಯವಾದಿ ವಿಷ್ಣು ಶಂಕರ್ ಜೈನ್ ಅವರು, ಗರ್ಭಗುಡಿಯಲ್ಲಿ ಜಲಾಭಿಷೇಕ ಮಾಡಲು ಕೇವಲ ವಿಐಪಿ ವ್ಯಕ್ತಿಗಳಿಗೆ ಮಾತ್ರ ಅನುಮತಿ ನೀಡುವುದು ಸಂವಿಧಾನದ ೧೪ನೇ ವಿಧಿಯಡಿ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಎಲ್ಲರಿಗೂ ಸಮಾನ ನಿಯಮವಿರಬೇಕು ಎಂದು ಆಗ್ರಹಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ವೋಚ್ಚ ನ್ಯಾಯಾಲಯವು ಕಠಿಣ ಶಬ್ದಗಳಲ್ಲಿ, ಇಂತಹ ಅರ್ಜಿಗಳನ್ನು ಸಲ್ಲಿಸಬೇಡಿ. ನಿಜವಾದ ಶ್ರದ್ಧಾವಂತ ಭಕ್ತರು ಇಂತಹ ಕೆಲಸ ಮಾಡುವುದಿಲ್ಲ. ನಾಳೆ ಜನರು ಮಂದಿರದಲ್ಲಿ ಮಂತ್ರೋಚ್ಚಾರಣೆ ಮಾಡಲು ಸಂವಿಧಾನದ ೧೯ನೇ ವಿಧಿಯಡಿ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹಕ್ಕನ್ನು ಕೇಳುತ್ತಾ ಬರಬಹುದು. ಎಂದು ತಿಳಿಸಿತು.
‘ವಿಐಪಿ’ ಯಾರು ಎಂಬುದನ್ನು ನಿರ್ಧರಿಸುವ ಅಧಿಕಾರ ಮಂದಿರ ಮತ್ತು ಆಡಳಿತ ಮಂಡಳಿಗೆ!
ಸರ್ವೋಚ್ಚ ನ್ಯಾಯಾಲಯವು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಿತು. ಆ ತೀರ್ಪಿನ ಪ್ರಕಾರ, ಒಂದು ನಿರ್ದಿಷ್ಟ ದಿನದಂದು ‘ವಿಐಪಿ’ ಯಾರು ಎಂಬುದನ್ನು ಅಲ್ಲಿನ ಜಿಲ್ಲಾಧಿಕಾರಿ ಮತ್ತು ಮಂದಿರದ ಆಡಳಿತ ಮಂಡಳಿಯು ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧರಿಸುತ್ತಾರೆ. ದೇಶದ ಬಹುತೇಕ ಧಾರ್ಮಿಕ ಸ್ಥಳಗಳಲ್ಲಿ ಇಂತಹ ವ್ಯವಸ್ಥೆ ಇದೆ ಎಂದು ಉಚ್ಚ ನ್ಯಾಯಾಲಯವು ಈಗಾಗಲೇ ಸ್ಪಷ್ಟಪಡಿಸಿತ್ತು. ಇದಕ್ಕೆ ಯಾವುದೇ ನಿರ್ದಿಷ್ಟ ಪಟ್ಟಿ ಅಥವಾ ಸ್ಥಿರ ವ್ಯಾಖ್ಯಾನವಿರುವುದಿಲ್ಲ. ಗರ್ಭಗುಡಿಗೆ ಪ್ರವೇಶ ಅನುಮತಿಸುವ ನಿರ್ಧಾರವು ಸಂಪೂರ್ಣವಾಗಿ ಆಡಳಿತದ ವಿವೇಚನಾಧಿಕಾರಕ್ಕೆ ಒಳಪಟ್ಟಿರುತ್ತದೆ.
ನ್ಯಾಯವಾದಿ ವಿಷ್ಣು ಜೈನ್ ಅವರು, ತಾರತಮ್ಯವನ್ನು ಕೊನೆಗಾಣಿಸಬೇಕು. ಒಂದೋ ಎಲ್ಲರಿಗೂ ಗರ್ಭಗುಡಿಗೆ ಪ್ರವೇಶ ನೀಡಬೇಕು ಅಥವಾ ಯಾರಿಗೂ ನೀಡಬಾರದು. ಸಾಮಾನ್ಯ ಭಕ್ತರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಾರೆ, ಆದರೆ ಪ್ರಭಾವಿ ವ್ಯಕ್ತಿಗಳು ಯಾವುದೇ ಅಡೆತಡೆಯಿಲ್ಲದೆ ದರ್ಶನ ಪಡೆಯುತ್ತಾರೆ ಎಂದು ವಾದಿಸಿದ್ದರು.
ಈ ಬಗ್ಗೆ ನ್ಯಾಯಾಲಯವು, ವ್ಯವಸ್ಥಾಪನೆಯ ಜವಾಬ್ದಾರಿಯನ್ನು ಯಾರು ಹೊಂದಿದ್ದಾರೋ ಅವರೇ ನಿರ್ಧಾರ ತೆಗೆದುಕೊಳ್ಳಲಿ. ಪ್ರತಿಯೊಂದು ವಿಷಯವನ್ನೂ ನ್ಯಾಯಾಲಯವು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ