
ಕೇದಾರನಾಥ (ಉತ್ತರಾಖಂಡ) – ಬದ್ರಿನಾಥ ಧಾಮ, ಕೇದಾರನಾಥ ಧಾಮ ಮತ್ತು ದೇವಸ್ಥಾನ ಸಮಿತಿಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಲಾಗುವುದು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಮುಂಬರುವ ಮಂಡಳಿ ಸಭೆಯಲ್ಲಿ ಅಧಿಕೃತ ಪ್ರಸ್ತಾವನೆಯನ್ನು ಅಂಗೀಕರಿಸಲಾಗುವುದು, ಎಂದು ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ ಅಧ್ಯಕ್ಷರು ಮತ್ತು ಭಾಜಪದ ಹಿರಿಯ ನಾಯಕ ಹೇಮಂತ್ ದ್ವಿವೇದಿ ಮಾಹಿತಿ ನೀಡಿದ್ದಾರೆ. ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಮಾರ್ಗದರ್ಶನದಲ್ಲಿ ಮುಸ್ಲಿಮರ ಅಕ್ರಮ ಮಜಾರ್‌ಗಳನ್ನು ತೆರವುಗೊಳಿಸುವ ಕ್ರಮವನ್ನೂ ಶ್ಲಾಘಿಸಿದರು.
ದ್ವಿವೇದಿಯವರು ಮಾತನಾಡುತ್ತಾ, “ದೇವಭೂಮಿ ಉತ್ತರಾಖಂಡದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವುದು ನಮ್ಮ ಅತ್ಯುನ್ನತ ಆದ್ಯತೆಯಾಗಿದೆ. ಕೇದಾರ ಖಂಡದಿಂದ ಮಾನಸ ಖಂಡದವರೆಗೆ ಸ್ಥಾಪಿಸಲಾದ ದೇವಾಲಯಗಳ ಸರಪಳಿಯಲ್ಲಿ ಸಾಂಪ್ರದಾಯಿಕವಾಗಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಲಾಗಿದೆ; ಆದರೆ ಬಿಜೆಪಿಯೇತರ ಸರಕಾರಗಳಿದ್ದಾಗ ಈ ಸಂಪ್ರದಾಯಗಳ ಉಲ್ಲಂಘನೆಯಾಗುತ್ತಿತ್ತು. ಆದ್ದರಿಂದ ಸಂಪ್ರದಾಯಗಳ ಸರಿಯಾದ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ