
ಬಾರಾಮತಿ (ಜಿಲ್ಲೆ ಪುಣೆ) – ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಜನವರಿ 29 ರಂದು ಮಧ್ಯಾಹ್ನ 12.15 ಗಂಟೆಗೆ ಬಾರಾಮತಿಯ ‘ವಿದ್ಯಾ ಪ್ರತಿಷ್ಠಾನ’ದ ಮೈದಾನದಲ್ಲಿ ಶೋಕಯುಕ್ತ ವಾತಾವರಣದಲ್ಲಿ ಮತ್ತು ಸರಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಹ, ನಿತಿನ್ ಗಡಕರಿ, ಭಾಜಪ ಅಧ್ಯಕ್ಷ ನಿತಿನ್ ನವೀನ್, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ, ಹಾಗೂ ಮಹಾರಾಷ್ಟ್ರ ರಾಜ್ಯ ಸಚಿವ ಸಂಪುಟದ ಸಚಿವರು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನಡೆದ ಅಂತ್ಯಯಾತ್ರೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತ ಮತ್ತು ಪಂಚಾಯತ ಸಮಿತಿ ಚುನಾವಣೆಯ ಪ್ರಚಾರಕ್ಕಾಗಿ ಜನವರಿ 28 ರಂದು ಬೆಳಿಗ್ಗೆ ಬಾರಾಮತಿಗೆ ಬರುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಜನರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಜನವರಿ 29 ರಂದು ಬೆಳಿಗ್ಗೆ ಕೆಲಕಾಲ ಅವರ ಕಾಟೇವಾಡಿಯ ನಿವಾಸಕ್ಕೆ ತರಲಾಗಿತ್ತು. ನಂತರ ಕಾಟೇವಾಡಿಯಿಂದ ವಿದ್ಯಾ ಪ್ರತಿಷ್ಠಾನದವರೆಗೆ ಅವರ ಅಂತ್ಯಯಾತ್ರೆ ನಡೆಸಲಾಯಿತು. ಈ ಅಂತ್ಯಯಾತ್ರೆಯು ವಿದ್ಯಾ ಪ್ರತಿಷ್ಠಾನಕ್ಕೆ ತಲುಪಿದಾಗ ಅಲ್ಲಿ ಲಕ್ಷಾಂತರ ಜನರ ಸಮೂಹವೇ ನೆರೆದಿತ್ತು. ಇದಾದ ನಂತರ ಅವರ ಪುತ್ರರಾದ ಪಾರ್ಥ ಮತ್ತು ಜಯ್ ಪವಾರ ಅವರು ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು, ಈ ಸಮಯದಲ್ಲಿ ಉಪಸ್ಥಿತರಿದ್ದ ಸಹಸ್ರಾರು ಬೆಂಬಲಿಗರು ಮತ್ತು ಕಾರ್ಯಕರ್ತರ ಕಣ್ಣುಗಳು ತೇವಗೊಂಡವು. ಅಜಿತ್ ಪವಾರ್ ಅವರ ಪಾರ್ಥಿವ ಶರೀರದೊಂದಿಗೆ ಪವಾರ್ ಕುಟುಂಬದ ಎಲ್ಲಾ ಸದಸ್ಯರು ಬಂದಿದ್ದರು. ಮಹಾರಾಷ್ಟ್ರ ಪೊಲೀಸ್ ಪಡೆಯ ವತಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿ ಮತ್ತು ಬಿಗುಲ್ ಮೊಳಗಿಸುವ ಮೂಲಕ ಅಜಿತ್ ಪವಾರ್ ಅವರಿಗೆ ಕೊನೆಯ ಗೌರವ ಸಲ್ಲಿಸಲಾಯಿತು. ರಾಜ್ಯ ಸರಕಾರವು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ