
ಕಾನ್ಪುರ (ಉತ್ತರ ಪ್ರದೇಶ) – ಇಲ್ಲಿನ ಪಂಕಿ ಪ್ರದೇಶದಲ್ಲಿ ರೋಹಿತ್ ಎಂಬ ಯುವಕ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಆತ ಮಾತನಾಡುತ್ತಿರುವ ವಿಡಿಯೋವೊಂದನ್ನು ಹರಿಬಿಟ್ಟಿದ್ದನು. ಅದರಲ್ಲಿ ಆತ, “ನನ್ನ ಮೇಲೆ ಮತಾಂತರವಾಗುವಂತೆ ಒತ್ತಡ ಹೇರಲಾಗುತ್ತಿದೆ; ಆದರೆ ನಾನು ಯಾವುದೇ ಕಾರಣಕ್ಕೂ ನನ್ನ ಧರ್ಮವನ್ನು ಬಿಡುವುದಿಲ್ಲ” ಎಂದು ಹೇಳಿದ್ದಾನೆ. ಘಟನೆಯ ನಂತರ ಮೃತನ ಸಂಬಂಧಿಕರು ರಸ್ತೆಯ ಮೇಲೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
೧. ರೋಹಿತ್ ತನ್ನ ವಿಡಿಯೋ ಸಂದೇಶದಲ್ಲಿ, “ದೇಶದಲ್ಲಿನ ಮಾದಕ ವ್ಯಸನವನ್ನು ತಡೆಯಬೇಕು ಮತ್ತು ಮಹಿಳೆಯರಿಗೆ ಗೌರವ ನೀಡಬೇಕು. ನನ್ನ ಜೀವನದಲ್ಲಿ ನನ್ನಿಂದಾದ ತಪ್ಪುಗಳಿಗಾಗಿ ನಾನು ಕ್ಷಮೆ ಯಾಚಿಸುತ್ತೇನೆ” ಎಂದು ಹೇಳಿದ್ದಾನೆ.
೨. ರೋಹಿತ್ ಮೇಲೆ ದೀರ್ಘಕಾಲದಿಂದ ಮತಾಂತರಕ್ಕಾಗಿ ಒತ್ತಡ ಹೇರಲಾಗುತ್ತಿತ್ತು, ಅದೇ ಕಾರಣಕ್ಕಾಗಿ ಆತ ಈ ಹಂತಕ್ಕೆ ತಲುಪಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಳೆದ ೩ ರಿಂದ ೪ ದಿನಗಳಿಂದ ರೋಹಿತ್ ನಡವಳಿಕೆ ಅಸಹಜವಾಗಿತ್ತು. ಆತ ಲಕ್ಷ್ಮಣಪುರಿಗೆ (ಲಕ್ನೋ) ಹೋಗಿದ್ದಾಗ ಕೆಲವರು ಆತನ ಮೇಲೆ ಹಲ್ಲೆ ನಡೆಸಿದ್ದರು ಎಂದು ಆತನ ಸಹೋದರಿ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಮತಾಂತರ ವಿರೋಧಿ ಕಾಯ್ದೆ ಜಾರಿಯಲ್ಲಿದ್ದರೂ ಸಹ ಹಿಂದೂಗಳು ಈ ರೀತಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶವು ಮತಾಂತರದ ಕೇಂದ್ರವಾಗುತ್ತಿರುವುದನ್ನು ಗಮನಿಸಿದರೆ, ಸರಕಾರವು ಈ ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸುವುದು ಅತ್ಯಗತ್ಯವಾಗಿದೆ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !