ಭಕ್ತಿಪೂರ್ವಕವಾಗಿ ಕೈಮುಗಿದು ಮಂದಿರದ ಆವರಣದಲ್ಲಿ ನಡೆಯುತ್ತಿರುವ ವಿಡಿಯೋ ವೈರಲ್

ತಿರುಪತಿ (ಆಂಧ್ರಪ್ರದೇಶ) – ಇಂಡೋನೇಷ್ಯಾದ ಮಾಜಿ ರಾಷ್ಟ್ರಾಧ್ಯಕ್ಷರಾದ ಜೊಕೊ ವಿಡೊಡೊ ಅವರು ಜನವರಿ 29 ರಂದು ಇಲ್ಲಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರಿಗೆ ಪೂಜೆ ಸಲ್ಲಿಸುವ ಗೌರವವೂ ಲಭಿಸಿತು ಎಂದು ತಿರುಮಲ ತಿರುಪತಿ ದೇವಸ್ಥಾನದ (TTD) ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ವಿಡೊಡೊ ಅವರು ಭಕ್ತಿಪೂರ್ವಕವಾಗಿ ಕೈಮುಗಿದು ಮಂದಿರದ ಆವರಣದಲ್ಲಿ ನಡೆಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
Former Indonesian President Joko Widodo visited the Sri Venkateswara Swamy Temple in Tirupati for a divine Darshan. 🛕✨
While this reflects the inclusivity of Hinduism, where a former President of the world’s largest Islamic nation can visit a Hindu temple, it wouldn’t be… pic.twitter.com/vqT6moJwRa
— Sanatan Prabhat (@SanatanPrabhat) January 31, 2026
ದರ್ಶನದ ನಂತರ, ವಿಡೊಡೊ ಅವರಿಗೆ ರಂಗನಾಯಕುಲ ಮಂಟಪದಲ್ಲಿ ರೇಷ್ಮೆ ವಸ್ತ್ರಗಳು, ಪ್ರಸಾದ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿಯ ಭಾವಚಿತ್ರವನ್ನು ನೀಡಿ ಗೌರವಿಸಲಾಯಿತು. ವಿಶ್ವದ ಅತಿದೊಡ್ಡ ಇಸ್ಲಾಮಿಕ್ ರಾಷ್ಟ್ರದ ಮಾಜಿ ರಾಷ್ಟ್ರಾಧ್ಯಕ್ಷರು ದೇವಸ್ಥಾನಕ್ಕೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ವಿಡೊಡೊ ಅವರು 2014 ರಿಂದ 2024 ರವರೆಗೆ 10 ವರ್ಷಗಳ ಕಾಲ ಇಂಡೋನೇಷ್ಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಪಾದಕೀಯ ನಿಲುವುವಿಶ್ವದ ಅತಿದೊಡ್ಡ ಇಸ್ಲಾಮಿಕ್ ರಾಷ್ಟ್ರದ ಮಾಜಿ ಅಧ್ಯಕ್ಷರು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುವುದು ಹಿಂದೂ ಧರ್ಮದ ಸರ್ವಸಮನ್ವಯತೆಯನ್ನು ಎತ್ತಿ ತೋರಿಸುತ್ತದೆ. ಆದರೆ, ಈ ಘಟನೆಯ ನಂತರ ಮುಲ್ಲಾ-ಮೌಲ್ವಿಗಳು ಅವರ ವಿರುದ್ಧ ಫತ್ವಾ ಹೊರಡಿಸಿದರೆ ಆಶ್ಚರ್ಯಪಡಬೇಕಿಲ್ಲ! |
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!