ಆರು ಪೊಲೀಸ್ ಸಿಬ್ಬಂದಿಗೆ ಗಾಯ

ರಾಯಪುರ (ಛತ್ತೀಸ್‌ಗಢ) – ರಾಜ್ಯದ ಗರಿಯಾಬಂದ್ ಜಿಲ್ಲೆಯ ದೂಧಕೈಯಾ ಗ್ರಾಮದಲ್ಲಿ ಫೆಬ್ರವರಿ 1 ರಂದು ಸಂಜೆ, ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಮುಸ್ಲಿಂ ಆರೋಪಿಗಳು ಹಿಂದೂಗಳ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಈ ಹಿಂಸಾಚಾರದಲ್ಲಿ 6 ಪೊಲೀಸರು ಗಾಯಗೊಂಡಿದ್ದಾರೆ.
ದೇವಸ್ಥಾನ ಧ್ವಂಸ ಪ್ರಕರಣದ ಹಿನ್ನೆಲೆ
4 ತಿಂಗಳ ಹಿಂದೆ ಇದೇ ಪ್ರದೇಶದಲ್ಲಿ ಕೆಲವು ಮುಸ್ಲಿಮರು ಗ್ರಾಮದ ಶಿವ ಮಂದಿರವನ್ನು ಧ್ವಂಸಗೊಳಿಸಿ ಅಪವಿತ್ರಗೊಳಿಸಿದ್ದರು. ಅದರ ನಂತರ ಫಿಂಗೇಶ್ವರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಎಲ್ಲಾ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಈ ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಗ್ರಾಮದ ದೂರುದಾರರು ಮತ್ತು ಗ್ರಾಮಸ್ಥರ ಮೇಲೆ ದಾಳಿ ಮಾಡಿದ್ದಾರೆ. ಆರೋಪಿ ಆರಿಫ್ ತನ್ನ ಇಬ್ಬರು ಸಹಚರರೊಂದಿಗೆ ಕೆಲವು ಜನರ ಮೇಲೆ ದಾಳಿ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಆಯುಧಗಳನ್ನು ಹಿಡಿದ ಈ ಆರೋಪಿಗಳು ಗ್ರಾಮಸ್ಥರ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಕೆಲವು ಯುವಕರ ಮೇಲೆ ಕಲ್ಲು ಮತ್ತು ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಇದರ ನಂತರ ಆಕ್ರೋಶಗೊಂಡ ಜನರು ಪರಸ್ಪರರ ಮನೆಗಳ ಮೇಲೆ ದಾಳಿ ಮಾಡಿದರು. ಹಲವು ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸ್ ಅಧೀಕ್ಷಕರು ಸ್ಥಳಕ್ಕೆ ಧಾವಿಸಿದರು. ಸುತ್ತಮುತ್ತಲಿನ ಪೊಲೀಸ್ ಠಾಣೆಗಳಿಂದ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರಸ್ತುತ ಗ್ರಾಮದಲ್ಲಿ ಕರ್ಫ್ಯೂನಂತಹ ಪರಿಸ್ಥಿತಿ ಇದ್ದು, ಶಾಂತಿ ಕಾಪಾಡುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.
ಸಂಪಾದಕೀಯ ನಿಲುವು
|
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !