ಕಾಂಗ್ರೆಸ್‌ನ 7 ಮತ್ತು ಸಿಪಿಐ(ಎಂ)ನ ಓರ್ವ ಸಂಸದ ಅಮಾನತು

ನವ ದೆಹಲಿ – ಸಂಸತ್ತಿನ ಬಜೆಟ್ ಅಧಿವೇಶನದ ಐದನೇ ದಿನದಂದು ಲೋಕಸಭೆಯ ಕಲಾಪವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು; ಆದರೆ ಅದು ಕೇವಲ 8 ನಿಮಿಷಗಳ ಕಾಲ ಮಾತ್ರ ನಡೆಯಿತು. ವಿರೋಧ ಪಕ್ಷದವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲವು ಸಂಸದರು ಲೋಕಸಭೆಯ ಸಭಾಧ್ಯಕ್ಷರ ಕಡೆಗೆ ಕಾಗದಗಳನ್ನು ಎಸೆದರು. ಈ ಅಶಿಸ್ತಿನ ವರ್ತನೆಯಿಂದಾಗಿ ಕಾಂಗ್ರೆಸ್‌ನ 7 ಮತ್ತು ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಐ-ಎಂ) ಒಬ್ಬರು ಸೇರಿದಂತೆ ಒಟ್ಟು 8 ಸಂಸದರನ್ನು ಇಡೀ ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.
ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಮಾತನಾಡಿ, “ಘೋಷಣೆಗಳನ್ನು ಕೂಗುವುದು ತಪ್ಪು ಮತ್ತು ನಿಯಮಗಳಿಗೆ ವಿರುದ್ಧವಾಗಿದೆ” ಎಂದು ತಿಳಿಸಿದರು. ಆದರೂ ವಿರೋಧ ಪಕ್ಷದವರು ಗದ್ದಲವನ್ನು ಮುಂದುವರಿಸಿದರು. ಈ ಸಂದರ್ಭದಲ್ಲಿ ಕ್ರಮ ಕೈಗೊಂಡ ಸಭಾಧ್ಯಕ್ಷರು ಕಾಗದ ಎಸೆದ 8 ಸಂಸದರನ್ನು ಅಮಾನತು ಮಾಡಿದರು. ಇದರಲ್ಲಿ ಮಣಿಕಂ ಟ್ಯಾಗೋರ್, ಗುರ್ಜೀತ್ ಔಜ್ಲಾ, ರಾಜಾ ವಡಿಂಗ್, ಹಿಬಿ ಈಡನ್, ಕಿರಣ್ ರೆಡ್ಡಿ, ಪ್ರಶಾಂತ್ ಪೋಡೋಲೆ, ವೆಂಕಟ್ ರಾಮನ್ ಮತ್ತು ಡೀನ್ ಕುರಿಯಾಕೋಸ್ ಸೇರಿದ್ದಾರೆ. ಅಮಾನತುಗೊಂಡ ಹಿನ್ನೆಲೆಯಲ್ಲಿ ಈ ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸದನದ ಕಲಾಪವು ಯಾವುದೇ ಅಡೆತಡೆಯಿಲ್ಲದೆ ನಡೆಯುವಂತಾಗಲು ಸಭಾಧ್ಯಕ್ಷ ಓಂ ಬಿರ್ಲಾ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದರು. ಸದನದ ಹೊರಗೆ ವಿರೋಧ ಪಕ್ಷದ ಸಂಸದರು ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ಸಂಪಾದಕೀಯ ನಿಲುವುಲೋಕಸಭೆಯ ಸಭಾಧ್ಯಕ್ಷರನ್ನು ಗೌರವಿಸದ ಸಂಸದರು, ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳಬಹುದು ಎಂಬುದನ್ನು ಊಹಿಸದಿರುವುದೇ ಲೇಸು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”