ಭೋಪಾಲ್ (ಮಧ್ಯಪ್ರದೇಶ) ಇಲ್ಲಿನ ಘಟನೆ
ಭೋಪಾಲ್ (ಮಧ್ಯಪ್ರದೇಶ) – ಇಲ್ಲಿನ ಶ್ರೀರಾಮ ಕಾಲೋನಿಯಲ್ಲಿ ಮೊಬೈಲ್ ಗೇಮ್ ವ್ಯಸನದ ಕಾರಣದಿಂದಾಗಿ ೧೪ ವರ್ಷದ ಅಂಶ ಸಾಹು ಎಂಬ ವಿದ್ಯಾರ್ಥಿಯು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂಶ್‌ಗೆ ಕಳೆದ ಕೆಲವು ದಿನಗಳಿಂದ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್ ಆಡುವ ಅಭ್ಯಾಸವಿತ್ತು ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ. ಇದೇ ವಿಷಯಕ್ಕಾಗಿ ಆತನಿಗೆ ಹಲವು ಬಾರಿ ತಿಳಿಸಿ ಹೇಳಲಾಗಿತ್ತು. ಓದಿನ ಮೇಲೆ ಪರಿಣಾಮ ಬೀರುತ್ತಿರುವುದನ್ನು ನೋಡಿ ಕುಟುಂಬದವರು ಆತನ ಮೊಬೈಲ್ ತೆಗೆದು ಕೊಂಡಿದ್ದರು. ಅಂಶ್‌ನ ತಂದೆ-ತಾಯಿ ಕಾರ್ಯಕ್ರಮವೊಂದರ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು. ಅವರು ಹಿಂತಿರುಗಿ ಬಂದಾಗ ಅಂಶ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ೮ನೇ ತರಗತಿಯಲ್ಲಿ ಓದುತ್ತಿದ್ದ ಅಂಶ್ ತನ್ನ ತಂದೆ-ತಾಯಿಯ ಏಕೈಕ ಮಗನಾಗಿದ್ದನು. ಆತನ ತಂದೆ-ತಾಯಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಾಗಿದ್ದಾರೆ.
| ಸಂಪಾದಕೀಯ ನಿಲುವು
ಪೋಷಕರು ಸ್ವತಃ ಸಾಧನೆ ಮಾಡದಿರುವುದರಿಂದ ಅದು ಮಕ್ಕಳ ಮೇಲೆಯೂ ಸಾಧನೆಯ ಸಂಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಇಂತಹ ಮಕ್ಕಳು ನಿರರ್ಥಕ ವಿಷಯಗಳಲ್ಲಿ ಅಥವಾ ಇತರ ಚಟಗಳಿಗೆ ಬಲಿಯಾಗಿ ತಮ್ಮದೇ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”