ಭಾರತ ಬಿಟ್ಟು ತೆರಳುವಂತೆ ಆದೇಶ

ಜೈಪುರ (ರಾಜಸ್ಥಾನ) – ರಾಜ್ಯದ ಹಿಂದೂಗಳ ಪವಿತ್ರ ಪುಣ್ಯಕ್ಷೇತ್ರವಾದ ಪುಷ್ಕರದಲ್ಲಿ ಆಕ್ಷೇಪಾರ್ಹ ಕೃತ್ಯ ಎಸಗಿದ ಇಬ್ಬರು ಬ್ರಿಟಿಷ್ ಪ್ರಜೆಗಳ ವೀಸಾವನ್ನು ರದ್ದುಗೊಳಿಸಲಾಗಿದೆ. ಇವರು ಇಲ್ಲಿನ ಗಲ್ಲಿಗಳಲ್ಲಿ ಇಸ್ರೇಲ್ ವಿರೋಧಿ ಮತ್ತು ಪ್ಯಾಲೆಸ್ಟೈನ್ ಪರ ಸ್ಟಿಕ್ಕರ್‌ಗಳನ್ನು (ಭಿತ್ತಿಪತ್ರಗಳನ್ನು) ಅಂಟಿಸುತ್ತಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭಿಸಿತ್ತು. ಇದರ ಆಧಾರದ ಮೇಲೆ ಆಡಳಿತ ಮಂಡಳಿಯು ತಕ್ಷಣವೇ ಇಬ್ಬರ ವೀಸಾವನ್ನು ರದ್ದುಗೊಳಿಸಿ, ಭಾರತವನ್ನು ತೊರೆಯುವಂತೆ ಆದೇಶಿಸಿದೆ.
ಲೂಯಿಸ್ ಗೇಬ್ರಿಯಲ್ ಮತ್ತು ಆತನ ಗೆಳತಿ ಅನುಶಿ ಎಮ್ಮಾ ಎಂಬುವವರೇ ಈ ಬ್ರಿಟಿಷ್ ಪ್ರಜೆಗಳಾಗಿದ್ದು, ಇವರು ಪ್ರವಾಸಿ ವೀಸಾದ ಮೇಲೆ ಭಾರತ ಪ್ರವಾಸಕ್ಕೆ ಬಂದಿದ್ದರು. ಇವರು ರಾಜಕೀಯ ಸ್ವರೂಪದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಘಟನೆಯು ಜನವರಿ 21 ರಂದು ನಡೆದಿದೆ. ಪುಷ್ಕರದ ಗಲ್ಲಿಗಳಲ್ಲಿ ರಾಜಕೀಯ ಸಂದೇಶವಿರುವ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುತ್ತಿದೆ ಎಂದು ಪೊಲೀಸರಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ಬ್ರಿಟಿಷ್ ದಂಪತಿಯ ಗುರುತು ಪತ್ತೆಯಾಗಿದ್ದು, ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ಪುಷ್ಕರದಲ್ಲಿ ಇಸ್ರೇಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಭದ್ರತಾ ಸಂಸ್ಥೆಗಳು ಹೆಚ್ಚಿನ ಜಾಗರೂಕತೆ ವಹಿಸಿವೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ