
ಕವರ್ಧಾ (ಛತ್ತೀಸ್‌ಗಢ) – ಜಿಲ್ಲೆಯ ದಮ್‌ಗಢ ಗ್ರಾಮದಲ್ಲಿ ಫೆಬ್ರವರಿ 2 ರಂದು ನಡೆದ ಭವ್ಯ ಸಮಾರಂಭದಲ್ಲಿ 66 ಹಿಂದೂ ಕುಟುಂಬಗಳು ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡವು. ಭಾಜಪದ ಶಾಸಕಿ ಭಾವನಾ ಬೋಹ್ರಾ ಅವರ ಸಮ್ಮುಖದಲ್ಲಿ ಈ ಕುಟುಂಬಗಳು ತಮ್ಮ ಮೂಲ ಧರ್ಮಕ್ಕೆ ಮರಳಲು ನಿರ್ಧರಿಸಿದವು. ಈ ಸಂದರ್ಭದಲ್ಲಿ ಶಾಸಕರು ಸ್ವತಃ ಅವರ ಕಾಲುಗಳನ್ನು ತೊಳೆದು, ತಿಲಕವನ್ನಿಟ್ಟು ಸ್ವಾಗತಿಸಿದರು. ಇದರಿಂದಾಗಿ ಇಡೀ ಪರಿಸರದಲ್ಲಿ ಈ ‘ಘರ್ ವಾಪಸಿ’ಯ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.
1. ದಮಗಢ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಆದಿವಾಸಿ ಗೌರವ ಸಮ್ಮೇಳನ’ದಲ್ಲಿ ಈ ಕುಟುಂಬಗಳನ್ನು ಸಾಂಪ್ರದಾಯಿಕವಾಗಿ ಸನ್ಮಾನಿಸಲಾಯಿತು. ಶಾಸಕಿ ಭಾವನಾ ಬೋಹ್ರಾ ಮಾತನಾಡಿ, “ಆದಿವಾಸಿ ಸಮಾಜವು ನಮ್ಮ ಪ್ರಾಚೀನ ಸಂಸ್ಕೃತಿಯ ನಿಜವಾದ ರಕ್ಷಕವಾಗಿದೆ. ಕೆಲವು ಕ್ರಿಶ್ಚಿಯನ್ ಮಿಷನರಿಗಳು ಆಮಿಷಗಳನ್ನು ತೋರಿಸುವ ಮೂಲಕ ಬಡ ಹಿಂದೂಗಳ ದಾರಿ ತಪ್ಪಿಸುತ್ತಿದ್ದಾರೆ; ಆದರೆ ಈಗ ಹಿಂದೂ ಸಮಾಜವು ಜಾಗೃತಗೊಂಡಿದೆ,” ಎಂದು ಹೇಳಿದರು.
2. ಈ ಹಿಂದೆ ನೇವುರ್ ಮತ್ತು ಕುಯಿ-ಕುಕದೂರ್ ಭಾಗದ ಸುಮಾರು 185 ಜನರು ಶಾಸಕಿ ಭಾವನಾ ಬೋಹ್ರಾ ಅವರ ನೇತೃತ್ವದಲ್ಲಿ ಹಿಂದೂ ಧರ್ಮಕ್ಕೆ ಮರಳಿದ್ದರು.
3. ಈ ಭಾಗದಲ್ಲಿ ನಡೆಯುತ್ತಿರುವ ಘರ್ ವಾಪಸಿಯನ್ನು ಕ್ರಿಶ್ಚಿಯನ್ ಮಿಷನರಿಗಳ ಮತಾಂತರದ ಪ್ರಯತ್ನಗಳಿಗೆ ನೀಡಿದ ಪ್ರಬಲ ಉತ್ತರವೆಂದು ನೋಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ