ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ನಿಂದ ಮಾಹಿತಿ

ಜೈಪುರ (ರಾಜಸ್ಥಾನ) – ಸಿಂಧೂ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲ್ಲ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆದು ಭಾರತದ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುವುದು. ಈ ನೀರಿನ ಲಾಭವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳಿಗೆ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಕಾರ್ಯಯೋಜನೆಯನ್ನು ಸಿದ್ಧಪಡಿಸುತ್ತಿದೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಬೇರೆಡೆಗೆ ತಿರುಗಿಸಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮಾಹಿತಿ ನೀಡಿದರು.
ಯಮುನಾ ಜಲ ಯೋಜನೆಯ ಕೆಲಸವನ್ನು ವೇಗವಾಗಿ ಮಾಡಲಾಗುವುದು, ಇದರಿಂದ ನೀರಿನ ಉತ್ತಮ ನಿರ್ವಹಣೆ ಮತ್ತು ಬಳಕೆಯಿಂದ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗಲಿದೆ ಎಂದು ಪಾಟೀಲ್ ಹೇಳಿದರು. ಯಮುನಾ ನದಿಯ ನೀರಿನ ಮೇಲೆ ರಾಜಸ್ಥಾನಕ್ಕೆ ಹಕ್ಕಿತ್ತು; ಆದರೆ ಹಿಂದಿನ ಸರಕಾರಗಳು ಈ ನಿಟ್ಟಿನಲ್ಲಿ ಯಾವುದೇ ದೃಢವಾದ ಪ್ರಯತ್ನಗಳನ್ನು ಮಾಡಲಿಲ್ಲ. ಈಗ ಹರಿಯಾಣ ಮತ್ತು ರಾಜಸ್ಥಾನ ಸರಕಾರಗಳ ನಡುವೆ ಯೋಜನಾ ವರದಿ ಸಿದ್ಧಪಡಿಸುವ ಕುರಿತು ಒಮ್ಮತ ಏರ್ಪಟ್ಟಿದೆ. ಶೀಘ್ರದಲ್ಲೇ ಈ ಯೋಜನೆಯ ಕೆಲಸ ಆರಂಭವಾಗಲಿದೆ. ಜಲವಾಹಿನಿ (ಪೈಪ್‌ಲೈನ್) ಮೂಲಕ ನೀರು ತರುವ ಈ ಯೋಜನೆಯ ಅಂದಾಜು ವೆಚ್ಚ ೭೭ ಸಾವಿರ ಕೋಟಿಯಿಂದ ೧ ಲಕ್ಷ ಕೋಟಿ ರೂಪಾಯಿಗಳಾಗಬಹುದು. ಪ್ರಸ್ತುತ ರಾಜಸ್ಥಾನದ ಬಳಿ ಅತ್ಯಂತ ಕಡಿಮೆ ನೀರಿದೆ; ಆದರೆ ಮುಂಬರುವ ದಿನಗಳಲ್ಲಿ ರಾಜಸ್ಥಾನದ ಬಳಿ ಗರಿಷ್ಠ ಪ್ರಮಾಣದ ನೀರು ಇರಲಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!