|

ತಿರುವನಂತಪುರಂ (ಕೇರಳ) – ಹಿಂದೂ ದೇವಸ್ಥಾನಗಳಲ್ಲಿ ಅಹಿಂದೂಗಳ ಪ್ರವೇಶದ ಮೇಲಿನ ಸಂಪೂರ್ಣ ನಿಷೇಧದ ನಿಯಮವನ್ನು ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿ ಮರುಪರಿಶೀಲಿಸಬೇಕು. ಇದರಿಂದ ಧಾರ್ಮಿಕ ಸ್ಥಳಗಳನ್ನು ನಿಯಂತ್ರಿಸುವ ಕಾನೂನುಗಳು ಸಾಮಾಜಿಕ ಅಸ್ಥಿರತೆ ಅಥವಾ ವಿವಾದಗಳಿಗೆ ಕಾರಣವಾಗಬಾರದು ಎಂದು ಕೇರಳ ಉಚ್ಚ ನ್ಯಾಯಾಲಯವು ಇತ್ತೀಚಿನ ತೀರ್ಪಿನಲ್ಲಿ ತಿಳಿಸಿದೆ. ಹಿಂದೂ ಹಬ್ಬಗಳ ಸಂದರ್ಭದಲ್ಲಿ ದೇವಸ್ಥಾನಕ್ಕೆ ಕ್ರಿಶ್ಚಿಯನ್ ಧರ್ಮಗುರುಗಳ ಪ್ರವೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅರ್ಜಿಯನ್ನು ವಜಾಗೊಳಿಸುವಾಗ, ‘ಕೇರಳ ಹಿಂದೂ ಸಾರ್ವಜನಿಕ ಆರಾಧನಾ ಸ್ಥಳಗಳ ನಿಯಮಗಳು, 1965’ ರ ನಿಯಮ 3(ಎ) ಅನ್ನು ಪ್ರಸ್ತುತ ರೂಪದಲ್ಲೇ ಮುಂದುವರಿಸಬೇಕೇ ಅಥವಾ ಧಾರ್ಮಿಕ ಪಾಲುದಾರರೊಂದಿಗೆ ಸಮಾಲೋಚಿಸಿ ತಿದ್ದುಪಡಿ ಮಾಡಬೇಕೇ ಎಂಬುದನ್ನು ಪರಿಶೀಲಿಸುವಂತೆ ನ್ಯಾಯಾಲಯವು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ಈ ವಿವಾದವು ಸೆಪ್ಟೆಂಬರ್ 7, 2023 ರಂದು ಪಥನಂತಿಟ್ಟ ಜಿಲ್ಲೆಯ ಅಡೂರ್ ಶ್ರೀ ಪಾರ್ಥಸಾರಥಿ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ನಡೆದ ಘಟನೆಯಿಂದ ಉಂಟಾಗಿದೆ. ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಆಡಳಿತ ಮಂಡಳಿಯು ಇಬ್ಬರು ಕ್ರಿಶ್ಚಿಯನ್ ಪಾದ್ರಿಗಳನ್ನು ಆಹ್ವಾನಿಸಿತ್ತು. ಕಾರ್ಯಕ್ರಮದ ನಂತರ, ಆ ಪಾದ್ರಿಗಳನ್ನು ಶ್ರೀಕೋವಿಲ್ (ಗರ್ಭಗುಡಿ) ಸಮೀಪದ ಒಳಾಂಗಣಕ್ಕೆ ಕರೆದೊಯ್ದು ಸನ್ಮಾನಿಸಲಾಯಿತು. ಪಾದ್ರಿಗಳು ಧಾರ್ಮಿಕ ಉಡುಪಿನಲ್ಲಿದ್ದ ಕಾರಣ ಕೆಲವು ಹಿಂದೂ ಭಕ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕೇರಳ ಹಿಂದೂ ಸಾರ್ವಜನಿಕ ಉಪಾಸನೆ ಸ್ಥಳ ಅಧಿನಿಯಮ 1965 ರ ನಿಯಮಗಳ ಪ್ರಕಾರ ಅಹಿಂದೂಗಳಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ ಎಂಬುದು ಅವರ ವಾದವಾಗಿತ್ತು.
ದೇವಸ್ಥಾನದ ಭಕ್ತರಾದ ಸನಿಲ ನಾರಾಯಣನ್ ನಂಬೂತಿರಿ ಅವರು ಕೇರಳ ಉಚ್ಚ ನ್ಯಾಯಾಲದ ಮೆಟ್ಟಿಲೇರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯು ಪಾದ್ರಿಗಳಿಗೆ ಪ್ರವೇಶ ನೀಡುವ ಮೂಲಕ ಕಾನೂನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ದೇವಸ್ಥಾನದ ಸಲಹಾ ಸಮಿತಿಯ ಸದಸ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಪದಚ್ಯುತಗೊಳಿಸಬೇಕು, ಎಂದು ಬೇಡಿಕೆ ಇಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಹಿಂದೂಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು
ದೇವಸ್ಥಾನದ ಪವಿತ್ರತೆಯನ್ನು ಮರುಸ್ಥಾಪಿಸಲು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ