ಫರೀದಾಬಾದ್ (ಹರಿಯಾಣ) ಜಿಲ್ಲೆಯ ನೀಮ್ಕಾ ಕಾರಾಗೃಹದಲ್ಲಿನ ಘಟನೆ

ಫರೀದಾಬಾದ್ (ಹರಿಯಾಣ) – ಇಲ್ಲಿನ ನೀಮ್ಕಾ ಕಾರಾಗೃಹದಲ್ಲಿ ಬಂಧಿಯಾಗಿದ್ದ ಭಯೋತ್ಪಾದಕ ಅಬ್ದುಲ್ ರೆಹಮಾನ್‌ನನ್ನು ಫೆಬ್ರವರಿ ೮ ರಂದು ಹತ್ಯೆ ಮಾಡಲಾಗಿದೆ. ಇದೇ ಕಾರಾಗೃಹದಲ್ಲಿದ್ದ ಅರುಣ್ ಚೌಧರಿ ಎಂಬ ಕೈದಿಯು ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ರೆಹಮಾನ್‌ನ ತಲೆಗೆ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ. ಕೊಲೆಯ ಹಿಂದಿನ ನಿಖರವಾದ ಕಾರಣ ಇದುವರೆಗೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಹತ್ಯೆಯು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ್ದೇ ಅಥವಾ ವೈಯಕ್ತಿಕ ದ್ವೇಷದಿಂದ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಅಬ್ದುಲ್ ರೆಹಮಾನ್‌ನನ್ನು ಮಾರ್ಚ್ ೨೦೨೫ ರಲ್ಲಿ ಹರಿಯಾಣದ ಪಲ್ವಲ್‌ನಿಂದ ಬಂಧಿಸಲಾಗಿತ್ತು. ಆತನಿಂದ ೨ ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈತ ಮೂಲತಃ ಉತ್ತರ ಪ್ರದೇಶದ ಅಯೋಧ್ಯೆಯ ನಿವಾಸಿಯಾಗಿದ್ದನು, ಅವನು ‘ಇಸ್ಲಾಮಿಕ್ ಸ್ಟೇಟ್ ಖೊರಾಸನ್’ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದನು. ಅಬ್ದುಲ್ ರೆಹಮಾನ್ ಮತ್ತು ಆತನ ಸಹಚರ ಸುಫಿಯಾನ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅಯೋಧ್ಯೆಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚು ರೂಪಿಸಿದ್ದು ಬೆಳಕಿಗೆ ಬಂದಿತ್ತು ಆರೋಪಿ ಅರುಣ್ ಚೌಧರಿಯನ್ನೂ ಸಹ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿತ್ತು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !