ದೇಶದ ವಿರುದ್ಧ ಅಪಪ್ರಚಾರ ಮಾಡಿದ ಆರೋಪ

ತೆಹ್ರಾನ್ (ಇರಾನ್) – ದೇಶದ ವಿರುದ್ಧ ಅಪಪ್ರಚಾರ ಮಾಡಿದ ಆರೋಪದ ಮೇಲೆ ಇರಾನ್ ನ್ಯಾಯಾಲಯವು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗಿಸ್ ಮೊಹಮ್ಮದಿ ಅವರಿಗೆ ೭ ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಶಿಕ್ಷೆಯ ಜೊತೆಗೆ, ಅವರಿಗೆ ೨ ವರ್ಷಗಳ ಕಾಲ ದೇಶದ ಒಳಗಿನ ಗಡಿಪಾರು ಮತ್ತು ಪ್ರಯಾಣ ನಿಷೇಧವನ್ನು ಹೇರಲಾಗಿದೆ. ಪ್ರಸ್ತುತ ಮೊಹಮ್ಮದಿ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ೨೦೨೨ ರಲ್ಲಿ ಹಿಜಾಬ್ ವಿರೋಧಿಸಿ ಜೈಲಿನಲ್ಲಿದ್ದಾಗ ಮೃತಪಟ್ಟ ಮಹ್ಸಾ ಅಮಿನಿ ಸಾವಿನ ನಂತರ ನಡೆದ ಪ್ರತಿಭಟನೆಗಳ ಪ್ರಮುಖ ಬೆಂಬಲಿಗರಾಗಿ ಇವರು ಗುರುತಿಸಿಕೊಂಡಿದ್ದರು. ವಿಶೇಷವೆಂದರೆ, ಮೊಹಮ್ಮದಿ ಈಗಾಗಲೇ ೧೩ ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿದ್ದರು ಮತ್ತು ಅನಾರೋಗ್ಯದ ಕಾರಣದಿಂದಾಗಿ ತಾತ್ಕಾಲಿಕವಾಗಿ ಬಿಡುಗಡೆಯಾಗಿದ್ದರು.
ನರ್ಗಿಸ್ ಮೊಹಮ್ಮದಿ ಕಳೆದ ೩೦ ವರ್ಷಗಳಿಂದ ಇರಾನ್‌ನಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ತಮ್ಮ ಹೋರಾಟದ ಅವಧಿಯಲ್ಲಿ ಅವರು ಈವರೆಗೆ ೧೩ ಬಾರಿ ಬಂಧನಕ್ಕೊಳಗಾಗಿದ್ದಾರೆ. ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದಾಗ ಅವರು ತೆಹ್ರಾನ್‌ನ ‘ಎವಿನ್’ ಕಾರಾಗೃಹದಲ್ಲಿದ್ದರು. ಪ್ಯಾರಿಸ್‌ನಲ್ಲಿ ವಾಸಿಸುತ್ತಿರುವ ಅವರ ಮಕ್ಕಳೇ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಇರಾನ್‌ನ ಎರಡನೇ ಮಹಿಳೆ ಇವರಾಗಿದ್ದಾರೆ. ಇರಾನ್‌ನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು, ರಾಜಕೀಯ ಕೈದಿಗಳ ಮೇಲಿನ ಅಮಾನವೀಯ ವರ್ತನೆ ಮತ್ತು ಮರಣದಂಡನೆ ಶಿಕ್ಷೆಯ ವಿರುದ್ಧ ಅವರು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ.
ಸಂಪಾದಕೀಯ ನಿಲುವುಇರಾನ್ನಲ್ಲಿ ಜನರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ನಿಜ ಮತ್ತು ಯಾರಾದರೂ ಅದನ್ನು ಹೇಳಿದರೆ ಅವರಿಗೆ ಶಿಕ್ಷೆಯಾಗುತ್ತದೆ; ಆದರೆ ಭಾರತದಲ್ಲಿ ದೇಶದ ವಿರುದ್ಧ ಉದ್ದೇಶಪೂರ್ವಕವಾಗಿ ವಿದೇಶಗಳಲ್ಲಿ ಅಪಪ್ರಚಾರ ಮಾಡುವ ಅನೇಕರು ಇದ್ದಾರೆ, ಅವರಿಗೆ ಎಂದಿಗೂ ಶಿಕ್ಷೆಯಾಗುವುದಿಲ್ಲ! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್