ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಮುಸಲ್ಮಾನರ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ವಿಡಿಯೋ ಪ್ರಕರಣ

ನವದೆಹಲಿ – ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ, ಚುನಾವಣೆಯ ಒಂದು ಭಾಗವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಹೋರಾಡಲಾಗುತ್ತದೆ. ಇದೇ ದೊಡ್ಡ ತೊಂದರೆಯಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯವು ಮೇಲಿನ ನಿರೀಕ್ಷಣೆಯನ್ನು ವ್ಯಕ್ತಪಡಿಸುವುದರ ಜೊತೆಗೆ, ಈ ಅರ್ಜಿಯ ವಿಚಾರಣೆಗಾಗಿ ದಿನಾಂಕವನ್ನು ನಿಗದಿಪಡಿಸುವುದಾಗಿ ತಿಳಿಸಿದೆ. ಈ ಅರ್ಜಿಯಲ್ಲಿ ಮುಖ್ಯಮಂತ್ರಿ ಸರಮಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
೧. ಫೆಬ್ರವರಿ ೮ ರಂದು ಕಾಂಗ್ರೆಸ್ ಪಕ್ಷವು ಅಸ್ಸಾಂ ಭಾಜಪದ ‘X’ (ಟ್ವಿಟರ್) ಖಾತೆಯಿಂದ ಪ್ರಸಾರ ಮಾಡಲಾದ ವಿಡಿಯೋದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಮುಸಲ್ಮಾನರ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬರುತ್ತಿದೆ ಎಂದು ದಾವೆ ಮಾಡಿತ್ತು. ಈ ವಿಡಿಯೋ ಅಲ್ಪಸಂಖ್ಯಾತರ ಹತ್ಯೆಯನ್ನು ಉತ್ತೇಜಿಸುವಂತಿದೆ ಎಂದು ಕಾಂಗ್ರೆಸ್ ಹೇಳಿದೆ. ಸದ್ಯ ಈ ವಿಡಿಯೋವನ್ನು ತೆಗೆದುಹಾಕಲಾಗಿದೆ.
೨. ಈ ವಿಡಿಯೋ ವಿರುದ್ಧ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಮಧ್ಯಪ್ರವೇಶಿಸುವಂತೆ ಕೋರಿದ್ದವು. ಈ ವಿಷಯಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ (FIR) ದಾಖಲಾಗಿಲ್ಲ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”