ಶೇಖ್ ಬಂಧನ

ಅನ್ನಮಯ್ಯ (ಆಂಧ್ರಪ್ರದೇಶ) – ಇಲ್ಲಿನ ತಾರಿಗೊಂಡದ ಜಿಲ್ಲಾ ಪರಿಷತ್ ಪ್ರೌಢಶಾಲೆಯ ಶಿಕ್ಷಕ ಝಾಕಿರ್ ಬಾಶಾ ಶೇಖ್ ಎಂಬಾತನ ಮೇಲೆ ಸುಮಾರು 30 ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಗುರ್ರಂಕೊಂಡ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಗ್ರಾಮಸ್ಥರು ಮತ್ತು ಸಂತ್ರಸ್ತ ಬಾಲಕಿಯರ ಪೋಷಕರು ಶಾಲೆಯ ಮುಂದೆ ತೀವ್ರ ಪ್ರತಿಭಟನೆ ನಡೆಸಿದರು. ಪ್ರಾಥಮಿಕ ತನಿಖೆಯ ನಂತರ ಶಿಕ್ಷಣ ಇಲಾಖೆಯು ಝಾಕಿರ್ ಬಾಶಾ ಶೇಖ್ ನನ್ನು ತಕ್ಷಣವೇ ಅಮಾನತುಗೊಳಿಸಿದೆ. (ಇಂತಹ ಕಾಮುಕ ಶಿಕ್ಷಕರನ್ನು ಶಾಲೆಯಿಂದ ಕೇವಲ ಅಮಾನತುಗೊಳಿಸುವುದಲ್ಲ, ಬದಲಾಗಿ ಸೇವೆಯಿಂದ ವಜಾಗೊಳಿಸಿ ಸೆರೆಮನೆಗೆ ತಳ್ಳಬೇಕು. ಆಗ ಮಾತ್ರ ಭವಿಷ್ಯದ ಪೀಳಿಗೆಯ ಹಾನಿಯನ್ನು ತಪ್ಪಿಸಲು ಸಾಧ್ಯ! – ಸಂಪಾದಕರು) ಆರೋಪಿ ಶಿಕ್ಷಕನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಜಿಲ್ಲಾಡಳಿತವು ಸಂತ್ರಸ್ತ ಬಾಲಕಿಯರು ಈ ಮಾನಸಿಕ ಆಘಾತದಿಂದ ಹೊರಬರಲು ಅವರಿಗೆ ವಿಶೇಷ ಆಪ್ತಸಮಾಲೋಚನೆಯ (ಕೌನ್ಸಲಿಂಗ) ವ್ಯವಸ್ಥೆ ಮಾಡಿದೆ. ಆಂಧ್ರಪ್ರದೇಶ ಸರಕಾರವು ಈ ಪ್ರಕರಣದ ವಿಚಾರಣೆಯನ್ನು ಶೀಘ್ರಗತಿಯಲ್ಲಿ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹಸ್ತಕ್ಷೇಪದಿಂದಾಗಿ ಈ ಪ್ರಕರಣದ ತನಿಖೆಯು ಮತ್ತಷ್ಟು ವೇಗ ಪಡೆದುಕೊಂಡಿದೆ.
ಸಂಪಾದಕೀಯ ನಿಲುವುಇಂತಹ ಕಾಮುಕರ ವಿರುದ್ಧ ಶೀಘ್ರಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅವರಿಗೆ ಗಲ್ಲು ಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸುವುದು ಆವಶ್ಯಕವಾಗಿದೆ! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein