ಮಹಾಶಿವರಾತ್ರಿಯಂದೇ ನಡೆದ ಖೇದಕರ ಘಟನೆ

ಹಾನಿಗೊಳಗಾದ ಶಿವಲಿಂಗ ಮತ್ತು ನಂದಿ ವಿಗ್ರಹ
(ಈ ಚಿತ್ರವನ್ನು ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಪ್ರಕಟಿಸಿಲ್ಲ, ಬದಲಾಗಿ ನಡೆದಿರುವ ಅಪಚಾರದ ಬಗ್ಗೆ ತಿಳಿಸಲು ಪ್ರಕಟಿಸಲಾಗಿದೆ. – ಸಂಪಾದಕರು)
ಮಂಗಳೂರು – ದೇಶಾದ್ಯಂತ ಮಹಾಶಿವರಾತ್ರಿಯ ಸಂಭ್ರಮ ಮನೆ ಮಾಡಿರುವಾಗಲೇ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ವಿಶೇಷವೆಂದರೆ, ಮಹಾಶಿವರಾತ್ರಿ ನಿಮಿತ್ತ ಹಿಂದಿನ ದಿನವಷ್ಟೇ ಗ್ರಾಮಸ್ಥರು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ಸುಣ್ಣ-ಬಣ್ಣ ಹಚ್ಚಿ ಅಲಂಕಾರ ಮಾಡಿದ್ದರು. ಬೆಳಿಗ್ಗೆ ಭಕ್ತರು ಪೂಜೆಗಾಗಿ ದೇವಸ್ಥಾನಕ್ಕೆ ಬಂದಾಗ, ವಿಗ್ರಹಗಳ ವಿರೂಪವಾಗಿರುವುದನ್ನು ನೋಡಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಕೃತ್ಯದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ದೋಷಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಅಜ್ಞಾತ ವ್ಯಕ್ತಿಗಳು ರಾತ್ರಿಯ ಕತ್ತಲಲ್ಲಿ ದೇವಸ್ಥಾನಕ್ಕೆ ನುಗ್ಗಿ ಶ್ರೀ ರಾಮಲಿಂಗೇಶ್ವರ ಶಿವಲಿಂಗ ಮತ್ತು ನಂದಿ ವಿಗ್ರಹವನ್ನು ಒಡೆದಿದ್ದಾರೆ. ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಹೊನ್ನಮ್ಮದೇವಿಯ ವಿಗ್ರಹಕ್ಕೂ ಹಾನಿ ಮಾಡಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರಲು ಮಹಾಶಿವರಾತ್ರಿಯಂದೇ ಇಂತಹ ಕೃತ್ಯ ಎಸಗಲಾಗಿದೆ. ಹಿಂದೂಗಳ ದೇಶದಲ್ಲೇ ಇಂತಹ ಘಟನೆ ನಡೆಯಲು ಧೈರ್ಯ ಮಾಡಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”