ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶ್ಲೀಲ ಹೇಳಿಕೆ ನೀಡಿದ ಪ್ರಕರಣ

(ಡಿಎಂಕೆ ಎಂದರೆ ದ್ರವಿಡ ಮುನ್ನೇತ್ರ ಕಳಗಂ – ದ್ರವಿಡ ಪ್ರಗತಿ ಸಂಘ)
ಚೆನ್ನೈ (ತಮಿಳುನಾಡು) – ಇಲ್ಲಿನ ಮಹಾನಗರ ದಂಡಾಧಿಕಾರಿ ನ್ಯಾಯಾಲಯವು ೬೫ ವರ್ಷದ ಡಿಎಂಕೆ ನಾಯಕ ಜೆ. ಶಿವಾಜಿ ಕೃಷ್ಣಮೂರ್ತಿ ಅವರಿಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ೨೦ ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿದೆ. ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅಶೋಭನೀಯ ಹೇಳಿಕೆ ನೀಡಿದ ಪ್ರಕರಣದಲ್ಲಿ ಅವರಿಗೆ ಈ ಶಿಕ್ಷೆಯನ್ನು ವಿಧಿಸಲಾಗಿದೆ.
೧೬ ಜೂನ್ ೨೦೨೩ ರಂದು ಎರುಕ್ಕಂಚೇರಿ ಎಂಬಲ್ಲಿನ ಕೃಷ್ಣಮೂರ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಈ ಪ್ರಕರಣ ವರದಿಯಾಗಿತ್ತು. ಆಗ ನಡೆದ ಕಾರ್ಯಕ್ರಮದಲ್ಲಿ ಶಿವಾಜಿ ಅವರು ತಮ್ಮ ಭಾಷಣದಲ್ಲಿ ರಾಜ್ಯಪಾಲರು, ನಟಿ ಮತ್ತು ನಂತರ ನಾಯಕಿಯಾದ ಖುಷ್ಬೂ ಸುಂದರ್, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ, ಬಿಜೆಪಿಯ ಮಾಜಿ ಪ್ರದೇಶಾಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಮಾಜಿ ಸಚಿವ ಡಿ. ಜಯಕುಮಾರ್ ಅವರ ಹೆಸರನ್ನು ಉಲ್ಲೇಖಿಸಿ ಅವಮಾನಕರ ಮತ್ತು ಅಶ್ಲೀಲ ಭಾಷೆಯನ್ನು ಬಳಸಿದ್ದರು. ಈ ಭಾಷಣದ ನಂತರ ವಿವಾದ ಉಂಟಾಯಿತು ಮತ್ತು ಪೊಲೀಸರು ಕ್ರಮ ಕೈಗೊಂಡರು. ಪೊಲೀಸರು ಶಿವಾಜಿ ಅವರನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ