ಪೊಲೀಸರ ಅನುಮತಿಯಿಲ್ಲದೆ ಜಂಗ್ಲಿ ಮಹಾರಾಜ್ ರಸ್ತೆಯಲ್ಲಿ ಪ್ರತಿಭಟನೆ!

ಪುಣೆ – ಪೊಲೀಸರ ಅನುಮತಿ ಪಡೆಯದೆ ಪ್ಯಾಲೆಸ್ಟೈನ್ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂಘಟನೆಯೊಂದರ 23 ಕಾರ್ಯಕರ್ತರ ವಿರುದ್ಧ ಡೆಕ್ಕನ್ ಪೊಲೀಸರು ದೂರು ದಾಖಲಿಸಿದ್ದಾರೆ. ಜಂಗ್ಲಿ ಮಹಾರಾಜ್ ರಸ್ತೆಯ ಶ್ರೀ ಛತ್ರಪತಿ ಸಂಭಾಜಿ ಉದ್ಯಾನವನದ ಬಳಿ ಫೆಬ್ರವರಿ 15 ರಂದು ಒಂದು ಸಂಘಟನೆಯಿಂದ ಪ್ಯಾಲೆಸ್ಟೈನ್ ಪರವಾಗಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಡೆಕ್ಕನ್ ಪೊಲೀಸ್ ಠಾಣೆಗೆ ಕರೆತರಲಾಯಿತು ಮತ್ತು ನೋಟಿಸ್ ನೀಡಿ ಬಿಡುಗಡೆ ಮಾಡಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಹವಾಲ್ದಾರ್ ನಲಿನ್ ಯೆರುಣಕರ್ ಅವರು ಡೆಕ್ಕನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಹಾನಗರ ಪಾಲಿಕೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಛತ್ರಪತಿ ಸಂಭಾಜಿ ಉದ್ಯಾನವನದಲ್ಲಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ಪ್ರದರ್ಶನ ವೀಕ್ಷಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ಕಾರಣದಿಂದಾಗಿ ಸಂಬಂಧಿತ ಸಂಸ್ಥೆಯು ಆಯೋಜಿಸಿದ್ದ ಪ್ರತಿಭಟನೆಗೆ ಅನುಮತಿಯನ್ನು ನಿರಾಕರಿಸಲಾಗಿತ್ತು ಎಂದು ಡೆಕ್ಕನ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಪಾದಕೀಯ ನಿಲುವು
|
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”