ಅಸ್ಸಾಂ ನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರಿಂದ ಆತಂಕ ವ್ಯಕ್ತ

ಗೌಹಾತಿ (ಅಸ್ಸಾಂ) – ಅಸ್ಸಾಂನ ಪ್ರಸ್ತುತ ಪರಿಸ್ಥಿತಿ ಅಷ್ಟೇನೂ ಚೆನ್ನಾಗಿಲ್ಲ. ಅಸ್ಸಾಂನ ಮುಸ್ಲಿಂ ಜನಸಂಖ್ಯೆಯ ದೊಡ್ಡ ಭಾಗವು ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿದೆ. ಈ ನುಸುಳುವಿಕೆಯು ಪ್ರಮುಖವಾಗಿ ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಕಾಲದಲ್ಲಿ ನಡೆದಿದೆ. ಆಗಿನ ಸರಕಾರಗಳು ಗಡಿಗಳ ಯೋಗ್ಯ ಮೇಲ್ವಿಚಾರಣೆ ಮಾಡಲಿಲ್ಲ. ಇದರಿಂದಾಗಿ ರಾಜ್ಯದ ಜನಸಂಖ್ಯಾ ಸಮತೋಲನವು ಹದಗೆಟ್ಟಿದೆ.
ಅಕ್ರಮ ನುಸುಳುವಿಕೆಯು ಅಸ್ಸಾಂ ಮತ್ತು ಇಡೀ ಈಶಾನ್ಯ ಪ್ರದೇಶದ ಮುಂದಿರುವ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಭವಿಷ್ಯದಲ್ಲಿ ಯಾವುದೇ ಸಂಘರ್ಷದ ಪರಿಸ್ಥಿತಿಯಲ್ಲಿ ರಾಜ್ಯದ ಕೆಲವು ಜನರು ಬಾಂಗ್ಲಾದೇಶವನ್ನು ಬೆಂಬಲಿಸಬಹುದು, ಅದರಿಂದ ಭದ್ರತೆಯ ಅಪಾಯ ನಿರ್ಮಾಣವಾಗಬಹುದು, ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಗುರುತು, ಭೂಮಿ ಮತ್ತು ಸಂಪನ್ಮೂಲಗಳನ್ನು ಸಂರಕ್ಷಿಸಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸರಮಾ ಹೇಳಿದರು. ಅಕ್ರಮ ಅತಿಕ್ರಮಣ ತೆರವುಗೊಳಿಸುವ ಅಭಿಯಾನಗಳು, ಗಡಿ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸುವುದು ಮತ್ತು ಎನ್‌ಆರ್‌ಸಿ ನವೀಕರಿಸುವ ಕ್ರಮಗಳನ್ನು ಜಾರಿಗೊಳಿಸಲಾಗಿವೆ. ಪ್ರಸ್ತುತ ಸರಕಾರವು ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಿ ರಾಜ್ಯದ ಭದ್ರತೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟಿಬದ್ಧವಾಗಿದೆ. ಕಾಂಗ್ರೆಸ್ ನಾಯಕರು ಈ ಆರೋಪಗಳು ತಪ್ಪು ಮತ್ತು ಸಮಾಜದಲ್ಲಿ ಒಡಕು ಉಂಟುಮಾಡುವಂತಿವೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ನಿಜವಾದ ಪ್ರಶ್ನೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಅಭಿಪ್ರಾಯ ವ್ಯಕ್ತಪಡಿಸಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !