|

ಜಮ್ಮು (ಜಮ್ಮು-ಕಾಶ್ಮೀರ) – ಜಮ್ಮು ವಿಭಾಗದ ‘ಆರ್.ಎಸ್. ಪುರ ಸೆಕ್ಟರ್’ನಲ್ಲಿರುವ ಬಾಲ ಸುಧಾರಣಾ ಕೇಂದ್ರದಿಂದ ೩ ಕೈದಿಗಳು ಪರಾರಿಯಾಗಿದ್ದಾರೆ. ಈ ಅಪ್ರಾಪ್ತ ಅಪರಾಧಿಗಳ ಪೈಕಿ ಒಬ್ಬನ ಬಳಿ ಪಿಸ್ತೂಲು ಇತ್ತು, ಹಾಗೆಯೇ ಇವರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದಾರೆ. ಇವರು ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ಘಟನೆಯು ಫೆಬ್ರವರಿ ೧೬ ರಂದು ಸಾಯಂಕಾಲ ೫:೧೫ ಕ್ಕೆ ನಡೆದಿದೆ. ಗಾಯಗೊಂಡ ಪೊಲೀಸರನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿನಯ ಕುಮಾರ ಮತ್ತು ಮುಖ್ಯ ಪೇದೆ ಪರ್ವೀನ ಕುಮಾರ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಬಾಲ ಸುಧಾರಣಾ ಕೇಂದ್ರದ ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೬ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಕೈದಿಗಳ ಬಳಿ ಪಿಸ್ತೂಲು ಎಲ್ಲಿಂದ ಬಂತು ಮತ್ತು ಅದರಿಂದ ಎಷ್ಟು ಗುಂಡುಗಳನ್ನು ಹಾರಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ವಿಶೇಷವೆಂದರೆ ಬಾಲ ಸುಧಾರಣಾ ಕೇಂದ್ರದಿಂದ ಪರಾರಿಯಾದ ೩ ಕೈದಿಗಳ ಪೈಕಿ ಒಬ್ಬನ ತಾಯಿಯೂ ನಾಪತ್ತೆಯಾಗಿದ್ದಾರೆ. ಮಹಿಳೆಯ ನಾಪತ್ತೆಯಾದ ಪರಿಸ್ಥಿತಿಯು ಸಂದೇಹಾಸ್ಪದವಾಗಿದೆ ಎಂದು ಪರಿಗಣಿಸಲಾಗಿದೆ. ಈ ಪ್ರಕರಣಕ್ಕೂ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯ ನಾಪತ್ತೆಯು ಜೈಲಿನಿಂದ ಪರಾರಿಯಾಗುವುದಕ್ಕೆ ಸಂಬಂಧಿಸಿದ ಒಂದು ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ಶಂಕಿಸಲಾಗಿದೆ.
ಕಠುವಾ: ಜೈಶ್-ಎ-ಮೊಹಮ್ಮದ್‌ನ 5 ಭಯೋತ್ಪಾದಕರು ಸಕ್ರಿಯಜಮ್ಮು-ಕಾಶ್ಮೀರದ ಕಠುವಾದಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ 5 ಭಯೋತ್ಪಾದಕರ ಚಿತ್ರಗಳನ್ನು ಬಿಡುಗಡೆ ಮಾಡಿವೆ. ಈ ಎಲ್ಲಾ ಭಯೋತ್ಪಾದಕರು ಇತ್ತೀಚೆಗಷ್ಟೇ ಕಠುವಾ ಜಿಲ್ಲೆಯೊಳಗೆ ನುಸುಳಿದ್ದಾರೆ. ಪಾಕಿಸ್ತಾನದಿಂದ ನಿಯಂತ್ರಣ ರೇಖೆಯನ್ನು ದಾಟಿ ಬಂದಿರುವ ಇವರು ಗಡಿ ಭಾಗದಲ್ಲಿ ಸಕ್ರಿಯರಾಗಿದ್ದಾರೆ. |
ಸಂಪಾದಕೀಯ ನಿಲುವು
|
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ