ಜಳಗಾಂನ ಬೆಂಡಾಳೆ ಕಾಲೇಜಿನಲ್ಲಿ 12ನೇ ತರಗತಿಯ ಪರೀಕ್ಷೆಯ ವೇಳೆ ನಡೆದ ಘಟನೆ!

ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸುತ್ತಿರುವ ಹಿಂದುತ್ವನಿಷ್ಠರು
ಜಳಗಾಂ – 12ನೇ ತರಗತಿಯ ಪರೀಕ್ಷೆಗೆ ಹೋಗುವಾಗ ಕೆಲವು ಹಿಂದೂ ವಿದ್ಯಾರ್ಥಿನಿಯರಿಗೆ ಅವರ ದುಪ್ಪಟ್ಟಾ ಮತ್ತು ‘ಸ್ಕಾರ್ಫ್’ ತೆಗೆಯುವಂತೆ ಒತ್ತಾಯಿಸಲಾಯಿತು; ಆದರೆ ಇತರ ಧರ್ಮದ ವಿದ್ಯಾರ್ಥಿನಿಯರಿಗೆ ಬುರ್ಖಾ ಮತ್ತು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಾಳೆ ಕಾಲೇಜಿನ ಪ್ರಾಂಶುಪಾಲರು ಮತ್ತು ಜಳಗಾಂ ಜಿಲ್ಲಾಧಿಕಾರಿಗಳಿಗೆ ಸ್ಥಳೀಯ ಹಿಂದುತ್ವನಿಷ್ಠ ಸಂಘಟನೆಗಳು ಮನವಿ ಸಲ್ಲಿಸಿವೆ. ಮನವಿ ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿಗಳು, ‘ಈ ಪ್ರಕರಣದ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದ್ದಾರೆ. (ಕೇವಲ ಭರವಸೆ ಸಾಲದು, ಸಂಬಂಧಪಟ್ಟ ಶಿಕ್ಷಕರ ಮೇಲೆ ತಕ್ಷಣದ ಕ್ರಮವಾಗಬೇಕು! ಇಂತಹ ಕಠಿಣ ಕ್ರಮವಾಗುವವರೆಗೆ ಹಿಂದುತ್ವನಿಷ್ಠ ಸಂಘಟನೆಗಳು ಬೆನ್ನಟ್ಟುವಿಕೆ ಮುಂದುವರಿಸುವುದು ಅವಶ್ಯಕ! – ಸಂಪಾದಕರು)
ನಡೆದ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಲಾಗಿದೆ. ಸಂಬಂಧಪಟ್ಟ ಶಿಕ್ಷಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರಿಗೆ ಎಚ್ಚರಿಕೆ ನೀಡಲಾಗುವುದು ಎಂದು ಪ್ರಾಂಶುಪಾಲರು ಭರವಸೆ ನೀಡಿದ್ದಾರೆ. ಕಾಲೇಜಿನಲ್ಲಿ ದುಪ್ಪಟ್ಟಾ ಧರಿಸುವ ಬಗ್ಗೆ ಯಾವುದೇ ಅಧಿಕೃತ ನಿಯಮವಿಲ್ಲ. ಆದ್ದರಿಂದ ವಿದ್ಯಾರ್ಥಿನಿಯರ ಮೇಲೆ ಯಾವುದೇ ನಿರ್ಬಂಧ ಹೇರಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
‘ವಿದ್ಯಾರ್ಥಿನಿಯರೊಂದಿಗೆ ಯಾವುದೇ ರೀತಿಯ ಧಾರ್ಮಿಕ, ಸಾಂಸ್ಕೃತಿಕ ಅಥವಾ ವೈಯಕ್ತಿಕ ಉಡುಗೆಯ ಆಧಾರದ ಮೇಲೆ ತಾರತಮ್ಯ ಮಾಡಬಾರದು ಮತ್ತು ರಾಜ್ಯಾದ್ಯಂತ ಇದರ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಿಂದುತ್ವನಿಷ್ಠರು ಆಗ್ರಹಿಸಿದರು.
ದುಪ್ಪಟ್ಟಾವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದ ಶಿಕ್ಷಕರ ಮಾತು!ಸಂಬಂಧಪಟ್ಟ ಶಿಕ್ಷಕರು ವಿದ್ಯಾರ್ಥಿನಿಯರ ಬಗ್ಗೆ ಖೇದಕರ ಮತ್ತು ಅವಮಾನಕರ ಹೇಳಿಕೆ ನೀಡಿದ್ದಾರೆ. ಅವರು, ‘‘ಪರೀಕ್ಷೆ ಇರುವಾಗ ದುಪ್ಪಟ್ಟಾ ಧರಿಸಿ ಬರಬಾರದು ಎಂದು ತಿಳಿಯುವುದಿಲ್ಲವೇ? ದುಪ್ಪಟ್ಟಾವನ್ನು ಕಸದ ಬುಟ್ಟಿಗೆ ಎಸೆಯಿರಿ!’ ಎಂದು ಹೇಳಿದ್ದರು. (ಇಂತಹ ಶಿಕ್ಷಕರು ಮುಸ್ಲಿಂ ವಿದ್ಯಾರ್ಥಿನಿಯರ ಬಗ್ಗೆ ಇಂತಹ ಹೇಳಿಕೆ ನೀಡಲು ಏಕೆ ಧೈರ್ಯ ಮಾಡುವುದಿಲ್ಲ? ಹಿಂದೂ ವಿದ್ಯಾರ್ಥಿನಿಯರು ಇಂತಹ ಹೇಳಿಕೆಗಳ ವಿರುದ್ಧ ಸ್ವತಃ ಕ್ಷಾತ್ರಭಾವದಿಂದ ಧ್ವನಿ ಎತ್ತಬೇಕು! – ಸಂಪಾದಕರು) (ಇಂತಹ ಅವಮಾನಕರ ಹೇಳಿಕೆ ನೀಡಿದ ಶಿಕ್ಷಕರ ವಿರುದ್ಧ ‘ಪೋಕ್ಸೋ’ (POCSO) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು!) |
ಸಂಪಾದಕೀಯ ನಿಲುವು
|
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ