ಇಂತಹ ಪ್ರತಿಯೊಬ್ಬ ಅಪರಾಧಿಗೂ ಗಲ್ಲು ಶಿಕ್ಷೆ ವಿಧಿಸುವುದು ಅವಶ್ಯಕವಾಗಿದೆ!

ಬಾಂದಾ (ಉತ್ತರಪ್ರದೇಶ) – ಇಲ್ಲಿನ ವಿಶೇಷ ಪೋಕ್ಸೋ ನ್ಯಾಯಾಲಯವು ರಾಮ ಭವನ (೪೮ ವರ್ಷ) ಮತ್ತು ಆತನ ಪತ್ನಿ ದುರ್ಗಾವತಿ (೪೫ ವರ್ಷ) ಅವರಿಗೆ ಚಿಕ್ಕ ಮಕ್ಕಳ ಲೈಂಗಿಕ ಶೋಷಣೆ ಮತ್ತು ಅದಕ್ಕೆ ಸಂಬಂಧಿಸಿದ ಅಶ್ಲೀಲ ಸಾಮಗ್ರಿಗಳನ್ನು ಆನ್ ಲೈನ್ ನಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ರಾಮ ಭವನ ಉತ್ತರಪ್ರದೇಶದ ನೀರಾವರಿ ಇಲಾಖೆಯ ಅಮಾನತುಗೊಂಡ ಕಿರಿಯ ಇಂಜಿನಿಯರ್ ಆಗಿದ್ದಾನೆ.
ಕಳೆದ ಒಂದು ದಶಕದಿಂದ ರಾಮ ಭವನ ಬಾಂದಾ, ಚಿತ್ರಕೂಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಕ್ಕಳ ಲೈಂಗಿಕ ಶೋಷಣೆ ನಡೆಸಿದ್ದಾನೆ ಮತ್ತು ಕನಿಷ್ಠ ೫೦ ಅಪ್ರಾಪ್ತ ಮಕ್ಕಳನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಸಿಬಿಐ ಆರೋಪಿಸಿತ್ತು. ಅವನು ಈ ಕೃತ್ಯದ ೩೪ ವಿಡಿಯೋಗಳು ಮತ್ತು ೬೭೮ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಲ್ಲದೆ, ಅಶ್ಲೀಲ ಜಾಲತಾಣಗಳಿಗೆ ಮಾರಾಟ ಮಾಡಿದ್ದಾನೆ. ಆತನ ನಿವಾಸದಲ್ಲಿ ನಡೆಸಿದ ಶೋಧದ ವೇಳೆ ನಗದು ಹಣ, ಲ್ಯಾಪ್ ಟಾಪ್, ವೆಬ್ ಕ್ಯಾಮೆರಾ, ಪೆನ್ ಡ್ರೈವ್ ಮತ್ತು ಮೆಮೊರಿ ಕಾರ್ಡ್ ಸೇರಿದಂತೆ ಎಲೆಕ್ಟ್ರಾನಿಕ್ ಶೇಖರಣಾ ಸಾಧನಗಳು ಮತ್ತು ಇತರ ಅಪರಾಧದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಆರೋಪಿಯ ಇಮೇಲ್ ಖಾತೆಗಳನ್ನು ಪರಿಶೀಲಿಸಿದಾಗ, ಬಾಲ ಲೈಂಗಿಕ ಶೋಷಣೆಯ ಸಾಮಗ್ರಿಗಳನ್ನು ಪ್ರಸಾರ ಮಾಡುವ ಉದ್ದೇಶದಿಂದ ಭಾರತೀಯ ಮತ್ತು ವಿದೇಶಿ ಪ್ರಜೆಗಳು ಸೇರಿದಂತೆ ಅನೇಕ ವ್ಯಕ್ತಿಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದ್ದನು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಸಿಬಿಐ ತಿಳಿಸಿದೆ.
UP POCSO Court awards death penalty to a couple who abused 33 children over a decade (2010–2020) in Banda & Chitrakoot, producing and selling obscene content online.
₹10 lakh compensation ordered for each victim.
For crimes against children, the strictest punishment is not… pic.twitter.com/j5CW05fRqW— Sanatan Prabhat (@SanatanPrabhat) February 21, 2026
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !