
ನವದೆಹಲಿ – ಪಾಕಿಸ್ತಾನವು ರಂಜಾನ್ ಪವಿತ್ರ ಮಾಸದಲ್ಲಿ ಅಫಘಾನಿಸ್ತಾನದ ಭೂಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಯನ್ನು ಭಾರತವು ಕಠಿಣ ಶಬ್ದಗಳಲ್ಲಿ ಖಂಡಿಸಿದೆ. ಈ ದಾಳಿಯಲ್ಲಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂಬುದು ಗಮನಕ್ಕೆ ಬಂದಿದೆ ಎಂದು ವಿದೇಶಾಂಗ ಸಚಿವಾಲಯದ ಕಚೇರಿ ತಿಳಿಸಿದೆ. ತಾನು ಭಯೋತ್ಪಾದಕರನ್ನು ಗುರಿ ಮಾಡುತ್ತಿರುವುದಾಗಿ ಪಾಕಿಸ್ತಾನ ವಾದಿಸಿತ್ತು. ಆದರೆ, ‘ಈ ದಾವೆ ಸುಳ್ಳು ಮತ್ತು ಅನೇಕ ನಿರಪರಾಧಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಅಫಘಾನ್ ಸರಕಾರ ಹೇಳಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಪಾಕಿಸ್ತಾನವು ತನ್ನ ಆಂತರಿಕ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ದಾಳಿಯನ್ನು ಮಾಡಿದೆ ಎಂದು ಹೇಳಿದರು. ಅಫಘಾನಿಸ್ತಾನದ ಪ್ರಾದೇಶಿಕ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕೆ ಭಾರತವು ಪೂರ್ಣ ಬೆಂಬಲ ನೀಡಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು