|

ಅಲಿಗಢ (ಉತ್ತರ ಪ್ರದೇಶ) – ಇಲ್ಲಿನ ಪ್ರಸಿದ್ಧ ಖೇರೇಶ್ವರ ಧಾಮ ಮಂದಿರದಲ್ಲಿ ಮಹಾಶಿವರಾತ್ರಿ ಮೇಳದ ವೇಳೆ ನಡೆದ ವಿವಾದದ ನಂತರ ಮಂದಿರ ಸಮಿತಿಯು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇನ್ನು ಮುಂದೆ ಮಂದಿರದ ಆವರಣದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದಿಲ್ಲ. ಮಂದಿರದ ಆವರಣದಲ್ಲಿ ಮುಸಲ್ಮಾನ ಯುವಕನೊಬ್ಬ ತನ್ನ ಗುರುತನ್ನು ಮರೆಮಾಚಿ ಮಹಿಳೆಯರ ಒಳ ಉಡುಪುಗಳ ಅಂಗಡಿಯನ್ನು ತೆರೆದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.
೧. ಮಹಾಶಿವರಾತ್ರಿಯ ನಿಮಿತ್ತ ಖೇರೇಶ್ವರ ಧಾಮದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಭವ್ಯ ಮೇಳವನ್ನು ಆಯೋಜಿಸಲಾಗಿತ್ತು. ಲಕ್ಷಾಂತರ ಭಕ್ತರು ಜಲಾಭಿಷೇಕಕ್ಕಾಗಿ ಆಗಮಿಸಿದ್ದರು. ಈ ಮೇಳದಲ್ಲಿ ‘ಅರ್ಮನ್’ ಎಂಬ ಮುಸಲ್ಮಾನ ಯುವಕನು ‘ಅಮನ್’ ಎಂಬ ಹಿಂದೂ ಹೆಸರನ್ನು ಹೇಳಿಕೊಂಡು ಅಂಗಡಿ ಪಡೆದಿದ್ದನು; ಆದರೆ ನಂತರ ಅವನ ಹೆಸರು ಅರ್ಮನ್ ಎಂದು ತಿಳಿದುಬಂದಿದೆ.
೨. ಕರಣಿ ಸೇನೆಯ ಯುವ ಜಿಲ್ಲಾಧ್ಯಕ್ಷ ಸಚಿನ ರಾಘವ್ ತಮ್ಮ ಬೆಂಬಲಿಗರೊಂದಿಗೆ ಸ್ಥಳಕ್ಕೆ ಆಗಮಿಸಿ ಅಂಗಡಿ ತೆರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಬಂಧಪಟ್ಟ ಯುವಕನು ಮಹಿಳೆಯರ ಒಳ ಉಡುಪುಗಳನ್ನು ಮಾರಾಟ ಮಾಡುತ್ತಿದ್ದಾನೆಂದು ಅವರು ಆರೋಪಿಸಿದರು. ವಿವಾದ ಹೆಚ್ಚಾದ ನಂತರ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಿ ಅಂಗಡಿಯನ್ನು ಮುಚ್ಚಿಸಲಾಯಿತು; ಆದರೆ ಪರಿಸ್ಥಿತಿ ಹದಗೆಡುವ ಸಾಧ್ಯತೆಯನ್ನು ವ್ಯಕ್ತಪಡಿಸಿ ಪೊಲೀಸರು ಕರಣಿ ಸೇನೆಯ ಯುವ ಜಿಲ್ಲಾಧ್ಯಕ್ಷ ಸಚಿನ್ ರಾಘವ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸರ ಈ ಕ್ರಮದ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.
೩. ಹಿಂದೂ ಭಕ್ತರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ದೇವಾಲಯ ಉತ್ಸವದ ಸಮಯದಲ್ಲಿ ಮುಸ್ಲಿಮರಿಗೆ ಅಂಗಡಿಗಳನ್ನು ಸ್ಥಾಪಿಸಲು ಅವಕಾಶ ನೀಡದಿರಲು ನಿರ್ಧರಿಸಿದ್ದೇವೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಗೆಹರಾಜ್ ಸಿಂಗ್ ಹೇಳಿದರು.
೪. ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಂದಿರದ ಆವರಣದ ಪವಿತ್ರತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!